ಉಡುಪಿ: ಜಿ.ಪಂ. ಸಿಇಓ ಅಧಿಕಾರ ಸ್ವೀಕಾರ
ಉಡುಪಿ: ಉಡುಪಿ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಪ್ರೀತಿ ಗೆಹ್ಲೋಟ್ ಶನಿವಾರ ಅಧಿಕಾರ ಸ್ವೀಕರಿಸಿದರು. ಇವರು ಈ ಹಿಂದೆ ಉತ್ತರ ಕನ್ನಡ ಜಿಲ್ಲೆ ಕುಮುಟಾದಲ್ಲಿ ಉಪ ವಿಭಾಗಾಧಿಕಾರಿಯಾಗಿದ್ದರು. ಉಡುಪಿ ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದ, ಸಿಂಧೂ ಬಿ ರೂಪೇಶ್ ಅವರು, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿದ್ದಾರೆ.