ಪಡಿತರ ಚೀಟಿ ಸಮಸ್ಯೆ ಶೀಘ್ರ ಪರಿಹರಿಸಿ -ಉಡುಪಿ ಜಿಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರ ಒತ್ತಾಯ

ಉಡುಪಿ: ಜಿಲ್ಲೆಯಲ್ಲಿ ಕಳೆದ 6-7 ತಿಂಗಳಿನಿಂದ ಪಡಿತರ ಚೀಟಿ ವಿತರಣೆಯಾಗದೇ ಸಾರ್ವಜನಿಕರಿಗೆ ಸಮಸ್ಯೆಯಾಗಿದ್ದು, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ಕೂಡಲೇ ಈ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಉಡುಪಿ ಜಿಲ್ಲಾ ಪಂಚಾಯತ್ ನಲ್ಲಿ, ಜಿ.ಪಂ. ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಎಲ್ಲಾ ಸದಸ್ಯರು ಒತ್ತಾಯಿಸಿದರು. ಈ ಕುರಿತು ಉತ್ತರಿಸಿದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಕುಸುಮಾಧರ್ ಮಾತನಾಡಿ, ಜಿಲ್ಲೆಯಲ್ಲಿ 4771 ಪಡಿತರ ಚೀಟಿ ವಿತರಣೆಗೆ ಮಾರ್ಚ್ 2019 ವರೆಗೆ […]