ಸಂತ ಮಂಥನದಲ್ಲಿ ಭಾಗಿಯಾದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ

ಉಡುಪಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರು ಚುನಾವಣಾ ಪ್ರವಾಸ ನಿಮಿತ್ತ ಉಡುಪಿಗೆ ಆಗಮಿಸಿದ ಸಂದರ್ಭ ಶ್ರೀಕೃಷ್ಣ ದೇವರ ದರ್ಶನ ಪಡೆದು ಬಳಿಕ ಪೇಜಾವರ ಮಠದ ಸಭಾಂಗಣದಲ್ಲಿ “ಸಂತ ಮಂಥನ” ಎನ್ನುವ ಕಾರ್ಯಕ್ರಮದಲ್ಲಿ ಕರಾವಳಿ ಭಾಗದ ಅನೇಕ ಮಠಾಧೀಶರೊಂದಿಗೆ ಸಮಾಲೋಚನೆಯನ್ನು ನಡೆಸಿದರು. ಪೇಜಾವರ ಮಠದ ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದರ ನೇತೃತ್ವದಲ್ಲಿ ನಡೆದ ಈ ಸಮಾವೇಶದಲ್ಲಿ ಅನೇಕ ಮಠಾಧೀಶರು ಭಾಗವಹಿಸಿದ್ದರು. ಪೇಜಾವರ ಮಠದ ಕಾರ್ಯನಿರ್ವಹಣಾಧಿಕಾರಿ ಸುಬ್ರಹ್ಮಣ್ಯ ಭಟ್, ವಾಸುದೇವ ಭಟ್ ಪೆರಂಪಳ್ಳಿ, ವಿಷ್ಣುಮೂರ್ತಿ ಆಚಾರ್ಯ,ಕೃಷ್ಣ ಭಟ್,ಇಂದುಶೇಖರ ಹೆಗಡೆ ಮೊದಲಾದವರು ನಡ್ಡಾರವರನ್ನು ಗೌರವದಿಂದ […]

ಉಡುಪಿಗೆ ಭಾರತೀಯ ಜನತಾ ಪಕ್ಷದಲ್ಲಿ ವಿಶೇಷ ಸ್ಥಾನವಿದೆ: ಜೆ.ಪಿ.ನಡ್ಡಾ

ಉಡುಪಿ: ಜಿಲ್ಲೆಗೆ ಭೇಟಿ ನೀಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೋಮವಾರದಂದು ಉಡುಪಿಯ ಎಂಜಿಎಂ ಕಾಲೇಜು ಮೈದಾನದಲ್ಲಿ ಬೂತ್ ಅಧ್ಯಕ್ಷರು ಮತ್ತು ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ, ಪವಿತ್ರ ಕೃಷ್ಣಮಠಕ್ಕೆ ಭೇಟಿ ನೀಡಿ, ಶ್ರೀಕೃಷ್ಣನ ಆಶೀರ್ವಾದ ಪಡೆದು ಮಾತು ಆರಂಭಿಸುತ್ತಿದ್ದೇನೆ. ಉಡುಪಿಗೆ ಭಾರತೀಯ ಜನತಾ ಪಕ್ಷದಲ್ಲಿ ವಿಶೇಷ ಸ್ಥಾನವಿದೆ. 1968ರಲ್ಲಿ ಬಾರಿಗೆ ಉಡುಪಿ ನಗರಸಭೆ ಭಾರತೀಯ ಜನ ಸಂಘದ ತೆಕ್ಕೆಗೆ ಬಂದಿದ್ದು, ಈ ಮೂಲಕ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಕಮಲ ಅರಳಲು ಸಾಧ್ಯವಾಗಿತ್ತು.1968ರಲ್ಲಿ ವಿಎಸ್ ಆಚಾರ್ಯ […]

ಬಿಜೆಪಿ ಹೊಸ ಶಕ್ತಿ ತುಂಬಲಿರುವ ಜೆ.ಪಿ. ನಡ್ಡಾ ಭೇಟಿ: ವೀಣಾ ಎಸ್.ಶೆಟ್ಟಿ

ಉಡುಪಿ: ಭಾರತೀಯಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರವರು ಬೂತ್ ಸಮಿತಿ ಅಧ್ಯಕ್ಷರೊಂದಿಗೆ ನಡೆಸುವ ಸಭೆಯು ಉಡುಪಿ ಜಿಲ್ಲಾ ಬಿಜೆಪಿಗೆ ಹೊಸ ಶಕ್ತಿ ತುಂಬಲಿದೆ ಎಂದು ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ತಿಳಿಸಿದರು. ಅವರು ರಾಷ್ಟ್ರೀಯ ಅಧ್ಯಕ್ಷರ ಭೇಟಿಯ ಬಗ್ಗೆ ಜಿಲ್ಲಾ ಮಹಿಳಾ ಮೋರ್ಚಾದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಉಡುಪಿ ಜಿಲ್ಲೆಯ 5 ಸ್ಥಾನಗಳ ಬಿಜೆಪಿ ಗೆಲುವಿನ ಅಂತರ ಈ ಸಭೆಯಿಂದ ಹೆಚ್ಚಲಿದೆ ಎಂದು ತಿಳಿಸಿದರು. ಮಂಗಳೂರು ಪ್ರಭಾರಿ ಉದಯಕುಮಾರ್ ಶೆಟ್ಟಿ, ಜಿಲ್ಲಾಧ್ಯಕ್ಷ […]