ಹಲಸಿನ ಮೌಲ್ಯವರ್ಧನೆಯಿಂದ ರೈತರ ಆರ್ಥಿಕ ಸಬಲತೆ ಸಾಧ್ಯ: ಯಶ್ ಪಾಲ್ ಸುವರ್ಣ

ಉಡುಪಿ: ಮಲೆನಾಡು ಸೇರಿದಂತೆ ಕರಾವಳಿ ಭಾಗದ ಪೌಷ್ಠಿಕ ಆಹಾರಗಳಲ್ಲಿ ಒಂದಾದ ಹಲಸು ಇಲ್ಲಿ ಹೇರಳವಾಗಿ ಉತ್ಪತ್ತಿಯಾಗುತ್ತದೆ. ಇದಕ್ಕೆ ಹೆಚ್ಚಿನ ಮೌಲ್ಯವರ್ಧನೆ ಹಾಗೂ ಮಾರುಕಟ್ಟೆಯನ್ನು ಒದಗಿಸುವುದರಿಂದ ರೈತರು ಹೆಚ್ಚಿನ ಲಾಭ ಪಡೆಯುವುದರೊಂದಿಗೆ ಆರ್ಥಿಕವಾಗಿ ಸಬಲರಾಗಲು ಸಾಧ್ಯವಾಗುತ್ತದೆ ಎಂದು ಶಾಸಕ ಯಶ್ಪಾಲ್ ಸುವರ್ಣ ಹೇಳಿದರು. ಅವರು ಉಡುಪಿ ದೊಡ್ಡಣಗುಡ್ಡೆ ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರ ಇಲ್ಲಿನ ಪುಷ್ಪ ಹರಾಜು ಕೇಂದ್ರ (ರೈತ ಸೇವಾ ಕೇಂದ್ರ)ದ ಆವರಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಉಡುಪಿ ಜಿಲ್ಲೆ ಹಾಗೂ ರೋಬೋಸಾಫ್ಟ್ ಟೆಕ್ನೋಲಾಜಿಸ್ […]