ಎಂಎಲ್‌ಸಿ ಚುನಾವಣಾ ಕಣಕ್ಕೆ ಜಗದೀಶ್ ಶೆಟ್ಟರ್: ಜೂನ್ 30 ರಂದು ಚುನಾವಣೆ
ಬೆಂಗಳೂರು: ಜೂನ್ 30 ರಂದು ನಡೆಯಲಿರುವ ಎಂಎಲ್‌ಸಿ ಚುನಾವಣೆಗೆ ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸೋಮವಾರ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ರಾಜ್ಯ ಸಚಿವ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಕಾರ್ಯದರ್ಶಿ ಎನ್‌ಎಸ್ ಬೋಸರಾಜು ಜೊತೆಗೆ ತಿಪ್ಪಣ್ಣಪ್ಪ ಕಮಕನೂರ್ ಅವರನ್ನು ಕಣಕ್ಕಿಳಿಸಿದೆ. ಶೆಟ್ಟರ್ ಅವರು ಜುಲೈ 12, 2012 ರಿಂದ ಮೇ 2013 ರವರೆಗೆ 10 ತಿಂಗಳ ಕಾಲ ಮುಖ್ಯಮಂತ್ರಿಯಾಗಿ ಬಿಜೆಪಿ ಸರ್ಕಾರದ ನೇತೃತ್ವ ವಹಿಸಿದ್ದಾರೆ. ಅವರು ವಿರೋಧ ಪಕ್ಷದ ನಾಯಕ ಮತ್ತು ವಿಧಾನಸಭೆ ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. […]