ಜಗದೀಶ್ ಆಚಾರ್ಯ ಪುತ್ತೂರು ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ಮಂಗಳೂರು: ಕಲಾಸಿಂಧು ಬಳಗದ ಖ್ಯಾತ ಗಾಯಕ ಜಗದೀಶ್ ಆಚಾರ್ಯ ಪುತ್ತೂರು ಅವರಿಗೆ 2019ರ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾಗಿದೆ. ಜ. 26 ರಂದು ಮಂಗಳೂರಿನ ನೆಹರೂ ಮೈದಾನದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಈಗಾಗಲೇ ಆರ್ಯಭಟ ಪ್ರಶಸ್ತಿ ಪಡೆದ ಜಗದೀಶ್ ಆಚಾರ್ಯ ಅವರು ದೇಶ ವಿದೇಶಗಳಲ್ಲಿ ಸಾವಿರಾರು ಸಂಗೀತ ಕಾರ್ಯಕ್ರಮಗಳನ್ನು ನೀಡಿ, ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.