ಗುಣಮಟ್ಟ ಖಾತರಿ ಪಡಿಸಿಕೊಂಡು ಸರಕು ಯಾ ಸೇವೆಗಳನ್ನು ಖರೀದಿಸಿ: ನ್ಯಾ. ಶರ್ಮಿಳಾ ಎಸ್
ಉಡುಪಿ: ಮಾರುಕಟ್ಟೆಯಲ್ಲಿ ಗ್ರಾಹಕನೇ ಸಾರ್ವಭೌಮನಾಗಿದ್ದು, ಸರಕು ಮತ್ತು ಸೇವೆಗಳನ್ನು ಖರೀದಿಸುವಾಗ ಗ್ರಾಹಕರು ತಮ್ಮ ಹಕ್ಕುಗಳು ಮತ್ತು ಜವಾಬ್ದಾರಿಗಳ ಬಗ್ಗೆ ತಿಳಿದಿರಬೇಕು. ಸರಕಾರಿ ಮತ್ತು ಖಾಸಗಿ ವಲಯದಲ್ಲಿ ಯಾವುದೇ ಸರಕು ಮತ್ತು ಸೇವೆಗಳನ್ನು ಪಡೆಯುವ ಮುನ್ನ ಗ್ರಾಹಕರು ಆ ವಸ್ತುಗಳು ಮತ್ತು ಸೇವೆಯ ಬಗ್ಗೆ ಸಂಪೂರ್ಣವಾಗಿ ಪರಿಶೀಲಿಸಿ, ಗುಣಮಟ್ಟವನ್ನು ಖಾತರಿಪಡಿಸಿಕೊಂಡು ಅವುಗಳನ್ನು ಖರೀದಿಸಬೇಕು. ಮಾರಾಟಗಾರರು ಕಳಪೆ ವಸ್ತುಗಳನ್ನು ಮೋಸದಿಂದ ಗ್ರಾಹಕರಿಗೆ ಮಾರಿದ್ದಲ್ಲಿ ಅಂತಹ ಮಾರಾಟಗಾರರಿಂದ ಸೂಕ್ತ ಪರಿಹಾರ ಪಡೆಯುವ ಹಕ್ಕುಗಳನ್ನು ಗ್ರಾಹಕರು ಹೊಂದಿದ್ದು, ಉಡುಪಿ ಜಿಲ್ಲೆಯಲ್ಲಿ ಗ್ರಾಹಕರ ವ್ಯಾಜ್ಯಗಳ […]