ಮಂಗಳೂರು ವಿವಿ ಪದವಿಯಲ್ಲಿ ಕನ್ನಡ ಕಡ್ಡಾಯ: ಜಾಗೃತಿ ಸಮಿತಿ ನಿರ್ಣಯ

ಉಡುಪಿ, ಜುಲೈ 10: ಮಂಗಳೂರು ವಿಶ್ವ ವಿದ್ಯಾನಿಲಯ ವ್ಯಾಪ್ತಿಯ ಪದವಿ ತರಗತಿಗಳಲ್ಲಿ ಪ್ರಥಮ ಭಾಷೆಯಾಗಿ ಕನ್ನಡ ಕಡ್ಡಾಯಗೊಳಿಸುವಂತೆ ಉಡುಪಿ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸಭೆಯಲ್ಲಿ ನಿರ್ಣಯಿಸಲಾಗಿದೆ. ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಅಧ್ಯಕ್ಷತೆಯಲ್ಲಿ ನಡೆದ ಸಮಿತಿ ಸಭೆಯಲ್ಲಿ ಈ ಕುರಿತು ವಿಶ್ವ ವಿದ್ಯಾನಿಲಯ ಹಾಗೂ ರಾಜ್ಯ ಸರಕಾರದ ಗಮನಕ್ಕೆ ತರಲು ತೀರ್ಮಾನಿಸಲಾಯಿತು. ಮಂಗಳೂರು ವಿಶ್ವ ವಿದ್ಯಾನಿಲಯ ವ್ಯಾಪಿಯ ಪದವಿ ತರಗತಿಗಳಲ್ಲಿ ಪ್ರಸಕ್ತ ಇಂಗ್ಲೀಷ್ ಭಾಷೆ ಅಧ್ಯಯನವನ್ನು ಕಡ್ಡಾಯಗೊಳಿಸಲಾಗಿದ್ದು, ಇತರೆ ಭಾಷೆ […]