ಜೈನ್ ಬಸದಿಗಳ ಜೀರ್ಣೋದ್ಧಾರಕ್ಕೆ ಸಹಾಯಧನ – ಅರ್ಜಿ ಆಹ್ವಾನ

ಉಡುಪಿ : ಉಡುಪಿ ಜಿಲ್ಲೆಯಲ್ಲಿರುವ ಜೈನ್ ದೇವಾಲಯ(ಬಸದಿ) ನವೀಕರಣ /ದುರಸ್ತಿ /ಜೀರ್ಣೋದ್ಧಾರಕ್ಕಾಗಿ ಸಹಾಯಧನ ಪಡೆಯಲು ಇಚ್ಛೆಯುಳ್ಳ ಜೈನ ಬಸದಿ ಸಮಿತಿ /ಮಂಡಳಿಯವರು, ಜಿಲ್ಲಾ ಅಧಿಕಾರಿಗಳು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಉಡುಪಿ ಇಲ್ಲಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.  ನಿಗಿದಿತ ನಮೂನೆ ಅರ್ಜಿ, ಇತರೆ ವಿವರಗಳನ್ನು ಅಲ್ಪಸಂಖ್ಯಾತರ ನಿರ್ದೇಶನಾಲಯದ ವೆಬ್‍ಸೈಟ್  ರಲ್ಲಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 0820-2574881 ಅನ್ನು ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.