ಜಲಶಕ್ತಿ ಅಭಿಯಾನ ಯೋಜನೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಕೇಂದ್ರದ ರಕ್ಷಣಾ ಸಚಿವಾಲಯದ ನಿರ್ದೇಶಕ ಪೀಯುಷ್ ರಂಜನ್
ಉಡುಪಿ: ಜಿಲ್ಲೆಯಲ್ಲಿ ಅಂತರ್ಜಲ ವೃದ್ಧಿಗೆ ಈಗಾಗಲೇ ಕೈಗೊಂಡಿರುವ ಕ್ರಮಗಳ ಜೊತೆಗೆ ಇನ್ನಷ್ಟು ಹೆಚ್ಚಿನ ಚಟುವಟಿಕೆಗಳನ್ನು ಕೈಗೊಳ್ಳುವಂತೆ ಕೇಂದ್ರದ ರಕ್ಷಣಾ ಸಚಿವಾಲಯದ ನಿರ್ದೇಶಕ ಪೀಯುಷ್ ರಂಜನ್ ಹೇಳಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ, ಜಿಲ್ಲೆಯಲ್ಲಿ ಜಲಶಕ್ತಿ ಅಭಿಯಾನ ಯೋಜನೆಗೆ ಸಂಬಂಧಿಸಿದಂತೆ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಮಳೆ ನೀರು ಕೊಯ್ಲು, ಕೆರೆಗಳ ಅಭಿವೃದ್ಧಿ, ಚೆಕ್ ಡ್ಯಾಂ ನಿರ್ಮಾಣ, ಪ್ಲಾಂಟೇಶನ್, ಇಂಗು ಗುಂಡಿಗಳ ರಚನೆ, ಜಲ ಮೂಲಗಳ ಸಂರಕ್ಷಣೆ […]