ಆಳ್ವಾಸ್ ಶಿಕ್ಷಣ ಸಂಸ್ಥೆ ಮೂಡುಬಿದಿರೆಯಲ್ಲಿ ಜಾಂಬೂರಿಗೆ ಭರ್ಜರಿ ಸಿದ್ಧತೆ: 100 ಎಕರೆ ಜಾಗ, 50 ಸಾವಿರ ವಿದ್ಯಾರ್ಥಿಗಳು, 10 ಸಾವಿರ ತರಬೇತುದಾರರು, ಜಾಂಬೂರಿಯ ವಿಶೇಷತೆಗಳು ಇಲ್ಲಿದೆ ಸಂಪೂರ್ಣ ಮಾಹಿತಿ..

ಮೂಡುಬಿದಿರೆ: ಸ್ಕೌಟ್ಸ್- ಗೈಡ್ ಸಂಸ್ಥೆಯು ಅಂತಾರಾಷ್ಟ್ರೀಯ ಸಂಸ್ಥೆಯಾಗಿದ್ದು, ಪ್ರಪಂಚದ 216ಕ್ಕಿಂತಲೂ ಹೆಚ್ಚಿನ ದೇಶಗಳಲ್ಲಿ ಯುವಜನತೆಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕ ಚಟುವಟಿಕೆಗಳೊಂದಿಗೆ ಮುನ್ನಡೆಯುತ್ತಿದೆ.1907ರಲ್ಲಿ ಬೇಡನ್ ಪೋವೆಲ್ ರವರು ಈ ಸಂಸ್ಥೆಯನ್ನು ಸ್ಥಾಪಿಸಿದ್ದರು. ಸ್ಕೌಟ್ಸ್-ಗೈಡ್ಸ್ ಸಂಸ್ಥೆಗೆ ನಮ್ಮ ಜಿಲ್ಲೆಯಲ್ಲೂ 100 ವರ್ಷಗಳ ಇತಿಹಾಸವನ್ನು ಹೊಂದಿದೆ. ಈಗಾಗಲೇ ಜಾಗತಿಕ ಮಟ್ಟದಲ್ಲಿ 24 ಜಾಂಬೂರಿ ಕಾರ್ಯಕ್ರಮ ನಡೆದಿದ್ದು, ದೇಶದಲ್ಲಿ ಪ್ರಪ್ರಥಮ ಬಾರಿಗೆ ಸ್ಕೌಟ್ಸ್-ಗೈಡ್ಸ್ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಕಾರ್ಯಕ್ರಮ ನಡೆಸುವ ಸೌಭಾಗ್ಯ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಗೆ ದೊರಕಿದೆ […]