ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಜಮ್ಮು ಕಾಶ್ಮೀರದಲ್ಲಿ ಫಾರ್ಮುಲಾ 4 ಕಾರ್ ರೇಸಿಂಗ್ ಪ್ರದರ್ಶನ: ಕಲ್ಲು ತೂರಾಟ ನಡೆಯುತ್ತಿದ್ದ ನಾಡಿನಲ್ಲಿ ರೇಸಿಂಗ್ ಕಾರುಗಳ ಓಡಾಟ

ಶ್ರೀನಗರ: ವಿಶ್ವಪ್ರಸಿದ್ಧ ದಾಲ್ ಸರೋವರದ ದಡದಲ್ಲಿ ಭಾನುವಾರದಂದು ಮೊದಲ ಬಾರಿಗೆ ಫಾರ್ಮುಲಾ 4 ಕಾರ್ ರೇಸಿಂಗ್ ಪ್ರದರ್ಶನ ಕಾರ್ಯಕ್ರಮವನ್ನು ಶ್ರೀನಗರದಲ್ಲಿ (Jammu and Kashmir) ಆಯೋಜಿಸಲಾಗಿತ್ತು. ವೃತ್ತಿಪರ ಫಾರ್ಮುಲಾ 4 (Formula 4 Racing) ಚಾಲಕರು ಪ್ರದರ್ಶಿಸಿದ ಸಾಹಸಗಳು ಸ್ಥಳೀಯರು ಮತ್ತು ಮೋಟಾರ್‌ಸ್ಪೋರ್ಟ್ ಅಭಿಮಾನಿಗಳನ್ನು ರೋಮಾಂಚನಗೊಳಿಸಿತು. ನಗರದ ದಾಲ್ ಸರೋವರದ ದಡದಲ್ಲಿರುವ ಲಲಿತ್ ಘಾಟ್‌ನಿಂದ ನೆಹರೂ ಪಾರ್ಕ್‌ವರೆಗಿನ 1.7 ಕಿಮೀ ಟ್ರ್ಯಾಕ್‌ನಲ್ಲಿ ರೇಸಿಂಗ್ ಕಾರುಗಳು “ರೊಂಯ್ಯ್” ಎನ್ನುತ್ತಾ ತಮ್ಮ ಚಾಕಚಕ್ಯತೆಯನ್ನು ಪ್ರದರ್ಶಿಸಿದವು. ಸ್ಥಳೀಯ ಅಧಿಕಾರಿಗಳ ಪ್ರಕಾರ, ಈ […]

ಜಮ್ಮು-ಕಾಶ್ಮೀರದಲ್ಲಿ ಎನ್ ಕೌಂಟರ್: 2 ಎಲ್ಇಟಿ ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಎನ್‌ಕೌಂಟರ್ ನಡೆದಿದೆ ಎಂದು ಪಿಟಿಐ ವರದಿ ಮಾಡಿದೆ. ಶೋಪಿಯಾನ್‌ನ ಅಲ್ಶಿಪೋರಾ ಪ್ರದೇಶದಲ್ಲಿ ಎನ್‌ಕೌಂಟರ್ ಪ್ರಾರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆಯಲ್ಲಿದ್ದು ಉಗ್ರರನ್ನು ಮಟ್ಟಹಾಕುತ್ತಿವೆ. ಕಾರ್ಯಾಚರಣೆಯಲ್ಲಿ 2 ಉಗ್ರರು ಹತರಾಗಿದ್ದಾರೆ. ಹತರಾದ ಭಯೋತ್ಪಾದಕರನ್ನು ಎಲ್ಇಟಿಯ ಮೋರಿಫತ್ ಮಕ್ಬೂಲ್ ಮತ್ತು ಜಾಜಿಮ್ ಫಾರೂಕ್ ಅಬ್ರಾರ್ ಎಂದು ಗುರುತಿಸಲಾಗಿದೆ. ಕಾಶ್ಮೀರಿ ಪಂಡಿತ್ ದಿವಂಗತ ಸಂಜಯ್ ಶರ್ಮಾ ಹತ್ಯೆಯಲ್ಲಿ ಭಯೋತ್ಪಾದಕ ಅಬ್ರಾರ್ ಭಾಗಿಯಾಗಿದ್ದಾನೆ ಎಂದು ಕಾಶ್ಮೀರ ಎಡಿಜಿಪಿ […]

ಕಾಶ್ಮೀರದಲ್ಲಿ ಅನುರಣಿಸಿತು ಕರಾವಳಿಯ ಗಂಡುಕಲೆ ಯಕ್ಷಗಾನ!! ನವರಾತ್ರಿಗೆ ವೈಷ್ಣೋದೇವಿ ಮಂದಿರದಲ್ಲಿ ಪ್ರದರ್ಶನಕ್ಕೆ ಗವರ್ನರ್ ರಿಂದ ಆಹ್ವಾನ!

ಶ್ರೀನಗರ: ಅ.2 ರಂದು ಗಾಂಧಿ ಜಯಂತಿ ಪ್ರಯುಕ್ತ ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದ ಶೇರ್-ಇ-ಕಾಶ್ಮೀರ್‌ ಇಂಟರ್‌ನ್ಯಾಷನಲ್‌ ಕಾನ್ಫರೆನ್ಸ್‌ ಸೆಂಟರ್‌ನಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಷನ್‌ ದೆಹಲಿ ಘಟಕ, ಸುಳ್ಯದ ಬೆಳ್ಳಾರೆಯ ನಿನಾದ ಸಾಂಸ್ಕೃತಿಕ ಕೇಂದ್ರ ಮತ್ತು ಜಮ್ಮು-ಕಾಶ್ಮೀರ ಸರ್ಕಾರದ ಕಲೆ, ಸಂಸ್ಕೃತಿ ಮತ್ತು ಭಾಷಾ ಇಲಾಖೆ ವತಿಯಿಂದ ಹಿಂದಿ ಯಕ್ಷಗಾನ ಮತ್ತು ಪಜ್ಜೆ-ಗೆಜ್ಜೆ ತುಳು-ಕನ್ನಡ ಶಾಸ್ತ್ರೀಯ, ಜಾನಪದ ನೃತ್ಯ ಪ್ರಕಾರ ಕಾರ್ಯಕ್ರಮ ನಡೆಯಿತು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ, ಕರ್ನಾಟಕದ 2 ಕಲಾ […]

ರಜೌರಿಯಲ್ಲಿ ಸೇನೆ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಕಾಳಗ: ಹ್ಯಾಂಡ್ಲರ್ ರಕ್ಷಣೆಗಾಗಿ ತನ್ನ ಪ್ರಾಣವನ್ನೇ ತೆತ್ತ ‘ಕೆಂಟ್’ ಆರ್ಮಿ ಶ್ವಾನ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ದೂರದ ಹಳ್ಳಿಯೊಂದರಲ್ಲಿ ಮಂಗಳವಾರ ನಡೆದ ಶೋಧ ಕಾರ್ಯಾಚರಣೆಯಲ್ಲಿ ಸೇನಾ ಯೋಧ ಮತ್ತು ಶಂಕಿತ ಪಾಕಿಸ್ತಾನಿ ಭಯೋತ್ಪಾದಕ ಗುಂಡಿನ ಚಕಮಕಿಯಲ್ಲಿ ಹತರಾಗಿದ್ದಾರೆ. ಸ್ಥಳದಿಂದ ಪಲಾಯನ ಮಾಡಲು ಪ್ರಯತ್ನಿಸುತ್ತಿದ್ದ ಭಯೋತ್ಪಾದಕರ ಜಾಡು ಹಿಡಿಯುತ್ತಿದ್ದ ಸೈನಿಕರ ತುಕುಡಿಯನ್ನು ಕೆಂಟ್ ಎಂಬ ಆರು ವರ್ಷದ ನಾಯಿ ಮುನ್ನಡೆಸುತ್ತಿತ್ತು. ಆರ್ಮಿಯ ಹೆಣ್ಣು ಶ್ವಾನ ಕೆಂಟ್ ‘ಆಪರೇಷನ್ ಸುಜಲಿಗಲ’ದ ಮುಂಚೂಣಿಯಲ್ಲಿತ್ತು. ಕೆಂಟ್ ಪಲಾಯನ ಮಾಡುವ ಭಯೋತ್ಪಾದಕರ ಜಾಡು ಹಿಡಿಯುತ್ತಾ ಸೈನಿಕರ ತುಕುಡಿಯನ್ನು ಮುನ್ನಡೆಸುತ್ತಿತ್ತು. ಈ ಸಂದರ್ಭ ಭಾರೀ […]

ಜಮ್ಮು ಕಾಶ್ಮೀರದ 35A ವಿಧಿಯು ಇತರ ನಾಗರಿಕರನ್ನು ಪ್ರಮುಖ ಸಾಂವಿಧಾನಿಕ ಹಕ್ಕುಗಳಿಂದ ವಂಚಿತವಾಗಿಸಿದೆ: ಜ. ಚಂದ್ರಚೂಡ್

ಹೊಸದಿಲ್ಲಿ: ಸಂವಿಧಾನದ 35A ವಿಧಿಯು ಜಮ್ಮು ಮತ್ತು ಕಾಶ್ಮೀರದಲ್ಲಿ ವಾಸಿಸದ ಜನರನ್ನು ಕೆಲವು ಪ್ರಮುಖ ಸಾಂವಿಧಾನಿಕ ಹಕ್ಕುಗಳಿಂದ ವಂಚಿತವಾಗಿಸಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೇಳಿದ್ದಾರೆ. “ಸಮಾನತೆಯ ಅವಕಾಶ, ರಾಜ್ಯ ಸರ್ಕಾರದಲ್ಲಿ ಉದ್ಯೋಗ ಮತ್ತು ಭೂಮಿ ಖರೀದಿಸುವ ಹಕ್ಕು -ಈ ವಿಧಿಯು ನಾಗರಿಕರಿಂದ ಇವೆಲ್ಲವನ್ನೂ ಕಸಿದುಕೊಳ್ಳುತ್ತದೆ. ಏಕೆಂದರೆ ನಿವಾಸಿಗಳು (ಜಮ್ಮು ಮತ್ತು ಕಾಶ್ಮೀರದ) ವಿಶೇಷ ಹಕ್ಕುಗಳನ್ನು ಹೊಂದಿದ್ದರಿಂದ, ಅನಿವಾಸಿಗಳನ್ನು ಹೊರಗಿಡಲಾಗಿತ್ತು” ಎಂದು ಅವರು ಹೇಳಿದ್ದಾರೆ. ಭಾರತೀಯ ಸಂವಿಧಾನವು “ಜಮ್ಮು ಮತ್ತು ಕಾಶ್ಮೀರದ ಸಂವಿಧಾನಕ್ಕಿಂತ ಉನ್ನತ […]