ಪಾಕ್​ ಗಡಿಯಿಂದ ಉಗ್ರರ ಒಳನುಸುಳುವಿಕೆಗೆ ಯತ್ನಿಸಿದ ಇಬ್ಬರ ಉಗ್ರರ ಹತ್ಯೆ

ಕುಪ್ವಾರ (ಜಮ್ಮು ಮತ್ತು ಕಾಶ್ಮೀರ): ಪಾಕಿಸ್ತಾನದಿಂದ ಭಾರತದ ಗಡಿಯೊಳಗೆ ಉಗ್ರರು ನುಸುಳುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ.ಕುಪ್ವಾರ ಜಿಲ್ಲೆಯ ಮಚ್ಚಲ್​ ಸೆಕ್ಟರ್​ನಲ್ಲಿ ಗುರುವಾರ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಇನ್ನಷ್ಟು ಉಗ್ರರು ನುಸುಳುತ್ತಿರುವ ಮಾಹಿತಿಯ ಮೇಲೆ ಕಾರ್ಯಾಚರಣೆ ಮುಂದುವರಿಸಲಾಗಿದೆ.ಪಾಕ್​ ಗಡಿಯಿಂದ ಉಗ್ರರ ಒಳನುಸುಳುವಿಕೆಯನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರನ್ನು ಸದೆಬಡಿಯಲಾಗಿದೆ. ಉಗ್ರರ ಗಡಿ ನುಸುಳುವಿಕೆಯ ಬಗ್ಗೆ ಮುಂಜಾನೆ ಮಾಹಿತಿ ತಿಳಿದ ತಕ್ಷಣ ಜಾಗೃತಗೊಂಡ ಸೇನೆ, ಕುಪ್ವಾರ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆಯ […]