ಜ.05: ಜಿಲ್ಲೆಯಲ್ಲಿ ರಾಜ್ಯಪಾಲರ ಪ್ರವಾಸ ಕಾರ್ಯಕ್ರಮ

ಉಡುಪಿ: ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಜನವರಿ 5 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದು, ಅಂದು ಬೆಳಗ್ಗೆ 10.30 ಕ್ಕೆ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಪುರುಷರ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ವಾಲಿಬಾಲ್ ಚಾಂಪಿಯನ್‌ಶಿಪ್ ಪಂದ್ಯದ ಉದ್ಘಾಟನೆ ನೆರವೇರಿಸಿ, ನಂತರ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಲಿದ್ದಾರೆ.