ಜ.28, 29: ಇಂಧನ ಸಚಿವರ ಪ್ರವಾಸ ಕಾರ್ಯಕ್ರಮ
ಉಡುಪಿ: ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಜನವರಿ 28 ಹಾಗೂ 29 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಜ.28 ರಂದು ಸಂಜೆ 4 ರಿಂದ 6 ಗಂಟೆಯವರೆಗೆ ಕಾರ್ಕಳ ವಿಕಾಸ ಕಚೇರಿಯಲ್ಲಿ ಸಾರ್ವಜನಿಕರ ಭೇಟಿ ಹಾಗೂ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಜ.29 ರಂದು ಬೆಳಗ್ಗೆ 8 ಗಂಟೆಯಿಂದ 10.15 ರ ವರೆಗೆ ನಿಟ್ಟೆ, ಬೋಳ, ನಂದಳಿಕೆ ಹಾಗೂ ಬೆಳ್ಮಣ್ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಗುದ್ದಲಿ […]