ಕಾಪು: ಅ.16 ರಂದು ಜನತಾ ದರ್ಶನ ಕಾರ್ಯಕ್ರಮ
ಕಾಪು: ಅ.16 ರಂದು ಬೆಳಿಗ್ಗೆ 10 ಗಂಟೆಗೆ ಕಾಪು ತಾಲೂಕು ಆಡಳಿತ ಸೌಧದ ಸಭಾಭವನದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಕಾಪು ತಾಲೂಕು ವ್ಯಾಪ್ತಿಗೆ ಒಳಪಡುವ ಸಾರ್ವಜನಿಕರು ಮತ್ತು ಗ್ರಾಮಸ್ಥರು ತಮ್ಮ ಅಹವಾಲುಗಳನ್ನು ಅಥವಾ ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಸೆ.25 ರಂದು ರಜತಾದ್ರಿಯಲ್ಲಿ ಉಸ್ತುವಾರಿ ಸಚಿವರಿಂದ ಜನತಾ ದರ್ಶನ ಕಾರ್ಯಕ್ರಮ: ಸಾರ್ವಜನಿಕರಿಂದ ಅಹವಾಲು ಸ್ವೀಕಾರ
ಉಡುಪಿ: ರಾಜ್ಯದ ವಿವಿಧ ಭಾಗಗಳಿಂದ ನಾಗರೀಕರು ಬೆಂಗಳೂರಿಗೆ ಆಗಮಿಸಿ ಹಲವಾರು ರೀತಿ ಸಮಸ್ಯೆಗಳ ಕುರಿತು ಮಾನ್ಯ ಮುಖ್ಯಮಂತ್ರಿಗಳನ್ನು ಭೇಟಿ ನೀಡಿ, ಅಹವಾಲುಗಳನ್ನು ಸಲ್ಲಿಸುತ್ತಿದ್ದು, ಸದ್ರಿ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ ಸೂಕ್ತ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಪ್ರತಿಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತೀ ತಿಂಗಳು “ಜನತಾದರ್ಶನ” ಕಾರ್ಯಕ್ರಮವನ್ನು ಹಮ್ಮಿಕೊಂಡು ಜನರ ಅಹವಾಲುಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಒದಗಿಸುವ ಸಲುವಾಗಿ ಮಾನ್ಯ ಮುಖ್ಯಮಂತ್ರಿಯವರು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸೆಪ್ಟಂಬರ್ 25 ರಂದು ಏಕಕಾಲದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ […]