ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಹೆಮ್ಮಾಡಿ: ಪದವಿ ಪೂರ್ವ ಶಿಕ್ಷಣ ಇಲಾಖೆ ಆಯೋಜಿಸಿದ್ದ ಉಡುಪಿ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ, ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಕೇದಾರ್ ಮರವಂತೆ ಭಾವಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಶ್ರುತಿಕಾ ಶೆಟ್ಟಿ ಕನ್ನಡ ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ರಕ್ಷಿತಾ ಭಟ್ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಸ್ಥಾನ, ಶ್ರದ್ಧಾ ಮೊಗವೀರ ಇಂಗ್ಲಿಷ್ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ. ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳು […]

ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಪೋಷಕ-ಶಿಕ್ಷಕ ಸಭೆ

ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ 2023-24ನೇ ಶೈಕ್ಷಣಿಕ ವರ್ಷದ ಪ್ರಥಮ ಹಾಗೂ ದ್ವಿತೀಯ ಪಿ.ಯು.ಸಿ.ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಮೊದಲನೆ ಪೋಷಕ-ಶಿಕ್ಷಕರ ಸಭೆ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾ ಗಣೇಶ ಮೊಗವೀರ್ ಮಾತನಾಡಿ ವರ್ಷದ ಶೈಕ್ಷಣಿಕ ಕಾರ್ಯಕಲಾಪಗಳ ಬಗ್ಗೆ, ಬದಲಾದ ಪರೀಕ್ಷಾ ಪದ್ದತಿಯ ಕುರಿತು ಹಾಗೂ ವಿದ್ಯಾರ್ಥಿಗಳ ಕಲಿಕಾ ಪ್ರಗತಿ ಕುರಿತು ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಉಡುಪಿಯ ತ್ರಿಷಾ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಸಿಎ.ಗೋಪಾಲಕೃಷ್ಣ ಭಟ್ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ಸಿಎ-ಸಿ.ಎಸ್ […]

ಜನತಾ ಪದವಿಪೂರ್ವ ಕಾಲೇಜು ಹಾಗೂ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ 

  ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹಾಗೂ ಜನತಾ ಪ್ರೌಢಶಾಲೆ ಹೆಮ್ಮಾಡಿಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಅಮೃತಮಹೋತ್ಸವ ಕಾರ್ಯಕ್ರಮ ನಡೆಯಿತು. ಬೈಂದೂರು ಕ್ಷೇತ್ರದ ಮಾಜಿ ಶಾಸಕ ಹಾಗೂ ಶ್ರೀ.ವಿ.ವಿ.ವಿ ಮಂಡಳಿ  ಅಧ್ಯಕ್ಷ  ಕೆ.ಗೋಪಾಲ ಪೂಜಾರಿಯವರು ಧ್ವಜಾರೋಹಣಗೈದು ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿಕೊಂಡು ರಾಷ್ಟ್ರೀಯ ಪ್ರಜ್ಞೆಯನ್ನು ಮೈಗೂಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಸಮಾರಂಭದ ಮುಖ್ಯ ಅತಿಥಿಯಾಗಿ ಸಮರ್ಪಣಾ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷ ಹಾಗೂ ಕಾಲೇಜಿನ ಪ್ರಾಂಶುಪಾಲ  ಗಣೇಶ ಮೊಗವೀರ ಸ್ವಾತಂತ್ರ್ಯದ ಈ […]

ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಪ್ರಾಂಶುಪಾಲ ಗಣೇಶ‌ ಮೊಗವೀರ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ  ಭಾರತೀಯ ಸೇನೆಯ  ನಿವೃತ್ತ  ಜೂನಿಯರ್ ಕಮಿಷನ್ಡ್ ಅಧಿಕಾರಿ ಜೋಷಿ ಪಿ.ಪಿ. ಮಾತನಾಡಿ ತಾವು ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ನೆನಪುಗಳೊಂದಿಗೆ ಯುದ್ಧದ ಕುರಿತಾದ ಸಂಪೂರ್ಣ ಮಾಹಿತಿ ನೀಡಿದರು. ಕಾಲೇಜು ಆಡಳಿತ ಮಂಡಳಿಯ ಉಪಾಧ್ಯಕ್ಷ ಹಾಗೂ ರಸಾಯನಶಾಸ್ತ್ರ ಉಪನ್ಯಾಸಕ ಡಾ. ಮಂಜುನಾಥ ಗಾಣಿಗ, ಕಾರ್ಯದರ್ಶಿ ಹಾಗೂ […]