ಇನ್ನು ಮುಂದೆ ಪ್ರಾಥಮಿಕ ಕೃಷಿ ಸಹಕಾರಿ ಸಂಘಗಳಿಗೂ ಜನೌಷಧಿ ಕೇಂದ್ರ ತೆರೆಯಲು ಅನುಮತಿ: ಕೇಂದ್ರ ಸಹಕಾರ ಸಚಿವಾಲಯದ ನಿರ್ಧಾರ

ಬೆಂಗಳೂರು: ದೇಶಾದ್ಯಂತ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳನ್ನು ತೆರೆಯಲು 2,000 ಪ್ರಾಥಮಿಕ ಕೃಷಿ ಸಹಕಾರಿ ಸಂಘಗಳಿಗೆ ಅನುಮತಿ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಸಹಕಾರ ಸಚಿವಾಲಯ ಮಂಗಳವಾರ ತಿಳಿಸಿದೆ. ಇದರಂತೆ ಆಗಸ್ಟ್ ವರೆಗೆ ಸುಮಾರು 1,000 ಜನೌಷಧಿ ಕೇಂದ್ರಗಳನ್ನು ತೆರೆಯಲಾಗುವುದು. ಉಳಿದ 1,000 ಕೇಂದ್ರಗಳನ್ನು ಈ ವರ್ಷದ ಡಿಸೆಂಬರ್ ವರೆಗೆ ತೆರೆಯಲಾಗುವುದು ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಸಹಕಾರ ಸಚಿವ ಅಮಿತ್ ಶಾ ಮತ್ತು ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಮನ್ಸುಖ್ ಎಸ್ ಮಾಂಡವಿಯಾ […]