ಭಗವದ್ಗೀತೆಯ ಶ್ರೀಕೃಷ್ಣನ ಸಂದೇಶಗಳು ಸಾರ್ವಕಾಲಿಕ: ರಘುಪತಿ ಭಟ್
ಉಡುಪಿ: ಭಗವದ್ಗೀತೆಯ ಮೂಲಕ ಶ್ರೀಕೃಷ್ಣ ಸಾರಿರುವ ಸಂದೇಶಗಳು ಸರ್ವಕಾಲಕ್ಕೂ ವಿಶ್ವಕ್ಕೆ ಅನ್ವಯವಾಗಲಿವೆ ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದರು. ಅವರು ಶುಕ್ರವಾರ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೈಸೂರು ವಿಭಾಗ ಮತ್ತು ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಸಹಕಾರದೊಂದಿಗೆ ಆಯೋಜಸಿದ್ದ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಾವಿರಾರು ವರ್ಷಗಳ ಹಿಂದೆ ಶ್ರೀ ಕೃಷ್ಣ ಭೋದಿಸಿದ ಭಗವದ್ಗೀತೆಯಲ್ಲಿ ಮನುಷ್ಯನ ಸುಗಮ ಜೀವನ ವಿಧಾನ ಆಡಳಿತ ವ್ಯವಸ್ಥೆ ಸಂದೇಶಗಳು […]