ಕೇಂದ್ರದ ವಿರುದ್ದ ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ: ರಾಜ್ಯ ಸರ್ಕಾರದ ವಿರುದ್ದ ರಾಜಧಾನಿಯಲ್ಲಿ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರವು ಜನರ ತೆರಿಗೆ ಹಣವನ್ನು ಪೋಲು ಮಾಡುತ್ತಿದ್ದು, ದೆಹಲಿಯಲ್ಲಿ ಪ್ರತಿಭಟನೆಗೆ ವ್ಯಯಿಸುತ್ತಿದೆ. ರಾಜ್ಯದ ಬರ ಪರಿಸ್ಥಿತಿಗೆ ಸ್ಪಂದಿಸದೇ ಇರುವ ಕರ್ನಾಟಕ ಸರ್ಕಾರದ ವಿರುದ್ಧ ಬಿಜೆಪಿ- ಜೆಡಿಎಸ್ ಶಾಸಕರು ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ದೆಹಲಿಯಲ್ಲಿ ಸಿದ್ದರಾಮಯ್ಯ ಸರ್ಕಾರ ಪ್ರತಿಭಟನೆ ಶುರುಮಾಡುವ 11 ಗಂಟೆ ಹೊತ್ತಿಗೆ ಬೆಂಗಳೂರಿನಲ್ಲಿ ವಿಧಾನಸೌಧದ ಆವರಣದಲ್ಲಿ ಬಿಜೆಪಿ- ಜೆಡಿಎಸ್‌ ಪ್ರತಿಭಟನೆ ನಡೆಯಲಿದೆ. “ರಾಜ್ಯದ ಕಾಂಗ್ರೆಸ್ ಸರ್ಕಾರ ಸ್ವತಃ 222 ಕ್ಕೂ ಹೆಚ್ಚು ತಾಲ್ಲೂಕುಗಳನ್ನು ಬರಗಾಲ ಪೀಡಿತ ತಾಲ್ಲೂಕುಗಳೆಂದು ಘೋಷಣೆ […]