ಜಿಲ್ಲೆಯಲ್ಲಿ 3,08,070 ಮಂದಿಗೆ ಜಂತುಹುಳು ನಿವಾರಣಾ ಮಾತ್ರೆ ವಿತರಣೆ  – ಜಿಲ್ಲಾಧಿಕಾರಿ

ಉಡುಪಿ:- ಜಿಲ್ಲೆಯಲ್ಲಿ ಫೆಬ್ರವರಿ 8 ರಂದು ರಾಷ್ಟ್ರೀಯ ಜಂತಹುಳು ನಿವಾರಣಾ ದಿನಾಚರಣೆ ಆಚರಿಸಲಾಗುತ್ತಿದ್ದು, 1 ರಿಂದ 19 ವರ್ಷದೊಳಗಿನ ಒಟ್ಟು 3,08,070 ಮಂದಿಗೆ ಜಂತುಹುಳು ನಿವಾರಣೆಯ ಆಲ್ಬೆಂಡಝೋಲ್ ಮಾತ್ರೆ ವಿತರಿಸುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ. ಅವರು ಸೋಮವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ  ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಕ್ಕಳು ಪೌಷ್ಠಿಕಾಂಶದಿಂದ ಕೂಡಿದ ಆಹಾರವನ್ನು ಸೇವಿಸಿದರೂ ಸಹ ಜಂತುಹುಳುಗಳ ಬಾಧೆಯಿಂದ ಮಕ್ಕಳಲ್ಲಿ ಅಪೌಷ್ಠಿಕತೆ ಹಾಗೂ ರಕ್ತಹೀನತೆ ಉಂಟಾಗಿ ಮಕ್ಕಳ […]