ಜನೌಷಧ ಅತ್ಯಂತ ಉತ್ತಮ ಗುಣಮಟ್ಟ ಹೊಂದಿದೆ: ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ

ಉಡುಪಿ: ಪ್ರಧಾನಮಂತ್ರಿ ಜನೌಷಧ ಕೇಂದ್ರಗಳ ಮೂಲಕ ಅತ್ಯಂತ ಕಡಿಮೆ ಹಾಗೂ ಉತ್ತಮ ಗುಣಮಟ್ಟದ ಔಷಧಗಳನ್ನು ಸಾರ್ವಜನಿಕರಿಗೆ ನೀಡಲಾಗುತ್ತಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಪ್ರಯೋಜನವನ್ನು ಪಡೆಯುವಂತಾಗಬೇಕು ಎಂದು ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದರು. ಜನಔಷಧಿ ದಿನಾಚರಣೆ ಅಂಗವಾಗಿ ಬ್ರಹ್ಮಾವರದಲ್ಲಿ ಇಂದು ಆಯೋಜಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ವೀಡಿಯೋ ಕಾನ್ಫರೆನ್ಸ್ ನೇರ ಸಂವಾದ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿದರು. ದೇಶದಲ್ಲಿ 2015 ರಲ್ಲಿ ನಡೆದ ಸರ್ವೇಯಲ್ಲಿ, ದೇಶದ ನಾಗರಿಕರು ತಮ್ಮ ದುಡಿಮೆಯನ್ನು […]