ಹಾಪ್ ಕಾಮ್ಸ್ ನಿರ್ದೇಶಕರಾಗಿ ಜಯಕುಮಾರ್ ಪರ್ಕಳ ನೇಮಕ
ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ತೋಟಗಾರಿಕಾ ಉತ್ಪನ್ನ ಬೆಳೆಗಾರರ ಸಹಕಾರ ಮಾರಾಟ ಮತ್ತು ಸಂಸ್ಕರಣ ಸಂಘ (ಹಾಪ್ ಕಾಮ್ಸ್)ದ ನಿರ್ದೇಶಕರಾಗಿ ಜಯಕುಮಾರ್ ಪರ್ಕಳ ಅವರು ಆಯ್ಕೆಯಾಗಿದ್ದಾರೆ. ಅವರು ಉಡುಪಿ ಕ್ಷೇತ್ರದಿಂದ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ. ಅವರು ಕಳೆದ 38 ವರ್ಷಗಳಿಂದ ಸರಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದು, ಪ್ರಸ್ತುತ ಜನತಾದಳ( ಜಾತ್ಯತೀತ) ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಜಯಕುಮಾರ್ ಆಯ್ಕೆಗೆ ಜೆಡಿಎಸ್ ಉಡುಪಿ ಜಿಲ್ಲಾಧ್ಯಕ್ಷ ಯೋಗೇಶ್ ವಿ. ಶೆಟ್ಟಿ ಹಾಗೂ ಪ್ರಧಾನ ಕಾರ್ಯದರ್ಶಿ ಜಯರಾಮ […]