ಉಡುಪಿ ಜಿಲ್ಲೆಯಲ್ಲಿ ಮಂಗನ ಕಾಯಿಲೆ: ಸಚಿವೆ ಜಯಮಾಲ ಬೇಜವಾಬ್ದಾರಿ ಹೇಳಿಕೆ

ಉಡುಪಿ: ಕುಂದಾಪುರ ತಾಲೂಕಿನ ಸಿದ್ಧಾಪುರ, ಹಳ್ಳಿಹೊಳೆ, ಹೊಸಂಗಡಿ, ಶಿರೂರು ಹಾಗೂ ಇತರ ಕಡೆಗಳಲ್ಲಿ ಮಂಗನ ಕಾಯಿಲೆ ಬಂದಿರುವುದು ವರದಿಯಾಗಿದೆ ಎಂಬ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲ ಅವರ ಬೇಜವಾಬ್ದಾರಿ ಹೇಳಿಕೆ ವ್ಯಾಪಾಕ ಆಕ್ರೋಶಕ್ಕೆ ಕಾರಣವಾಗಿದೆ. ಉಡುಪಿ ಜಿಲ್ಲೆಯಲ್ಲಿ ಎಲ್ಲೂ ಯಾವುದೇ ಶಂಕಿತ ಪ್ರಕರಣಗಳು ಕಂಡು ಬಾರದಿದ್ದರೂ ಸಚಿವೆ ತಮ್ಮ ಅಧಿಕೃತ ಹೇಳಿಕೆಯಲ್ಲಿ ಕುಂದಾಪುರ ತಾಲೂಕಿನಲ್ಲಿ ಕಾಯಿಲೆ ಬಂದಿದೆ ಎಂದು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವರು ಜನರಿಗೆ ತಪ್ಪು ಸಂದೇಶವನ್ನು ನೀಡುತ್ತಿರುವುದು ಎಷ್ಟು ಸರಿ. […]