ರೈತರಿಗೆ 10 ಲಕ್ಷದ ವರೆಗೆ ಬಡ್ಡಿರಹಿತ ಸಾಲ ನೀಡಲು ಪ್ರಯತ್ನ : ಡಾ.ಜಯಮಾಲಾ
ಉಡುಪಿ: ರೈತರು ಮನೆ ನಿರ್ಮಾಣ, ತೋಟ ಅಭಿವೃದ್ಧಿ, ಬೇಲಿ ನಿರ್ಮಾಣ ಮುಂತಾದ ಅಭಿವೃದ್ದಿ ಕಾರ್ಯಕ್ರಮಗಳನ್ನು ಮಾಡಲು10 ಲಕ್ಷ ರೂ.ವರೆಗೆ ಬಡ್ಡಿ ರಹಿತ ಸಾಲ ನೀಡುವ ಕುರಿತಂತೆ ಸರಕಾರದ ಮಟ್ಟದಲ್ಲಿ ಚರ್ಚಿಸಿ, ಜಾರಿಗೆ ಪ್ರಯತ್ನಿಸಲಾಗುವುದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲ ಭರವಸೆ ನೀಡಿದ್ದಾರೆ. ಅವರು ಭಾನುವಾರ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಅಂತಾರಾಷ್ಟ್ರೀಯ ರೈತರ ದಿನಾಚರಣೆ ಮತ್ತು […]