ನಾಪತ್ತೆಯಾಗಿರುವ ಮೀನುಗಾರರ ಮನೆಗೆ ಉಸ್ತುವಾರಿ ಸಚಿವೆ ಜಯಮಾಲ ಭೇಟಿ ನೀಡಿ ಸಾಂತ್ವನ

ಮಲ್ಪೆ: ನಾಪತ್ತೆಯಾಗಿರುವ ಮೀನುಗಾರರ ಮನೆಗೆ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲ ಭೇಟಿ ನೀಡಿ ಸಾಂತ್ವನ ಹೇಳಿದರು. ನಾಪತ್ತೆಯಾಗಿರುವ ಸುವರ್ಣ ತ್ರಿಭುಜ ಬೋಟ್ ಮಾಲೀಕನಾಗಿರುವ ಬಡನಿಡಿಯೂರಿನ ಪಾವಂಜಿಗುಡ್ಡೆಯ ಚಂದ್ರಶೇಖರ್ ಅವರ ಮನೆಗೆ ತೆರಳಿದ ಸಚಿವರು, ಚಂದ್ರಶೇಖರ್ ಅವರ ಪತ್ನಿ ಶ್ಯಾಮಲಾರಿಗೆ ಸಾಂತ್ವನ ಹೇಳಿದರು. ಸರಕಾರ ವಿಷಯ ತಿಳಿದ ತಕ್ಷಣವೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ  ಜೊತೆ  ಮಾತನಾಡಿ, ನಾಪತ್ತೆಯಾದ ಮೀನುಗಾರರ ಹುಡುಕಾಟಕ್ಕೆ  ಬೇಕಾದ ಎಲ್ಲಾ  ಕ್ರಮಕೈಗೊಳ್ಳಲು ನಿರ್ದೇಶನ ನೀಡಿದೆ ಎಂದು ತಿಳಿಸಿದರು. ನಿಮ್ಮ ಪತಿ ಕಾಣೆಯಾದದ್ದು ನಮಗೂ ನೋವಿದೆ. […]