ಜೂನ್ 18: ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಉಡುಪಿ, ಜೂನ್ 15: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ ಜೂನ್ 18 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಬೆಳಗ್ಗೆ 8.30 ಕ್ಕೆ ಉಡುಪಿಗೆ ಆಗಮಿಸಿ, ಜಿಲ್ಲೆಯ ಪ್ರವಾಹ/ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವರು, ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲೆಯ ಪ್ರವಾಹ/ ಬರ ಪರಿಹಾರ ಕ್ರಮಗಳ ಕುರಿತು ಚರ್ಚೆ ನಡೆಸುವರು ಎಂದು ಪ್ರಕಟಣೆ […]

ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ನಿರ್ವಹಣೆ ಕುರಿತು ಸಭೆ

ಉಡುಪಿ: ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ನಿರ್ವಹಣೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ ಅಧ್ಯಕ್ಷತೆಯಲ್ಲಿ ಶುಕ್ರವಾರ ಜಿ.ಪಂ. ಸಭಾಂಗಣದಲ್ಲಿ ಸಭೆ ನಡೆಯಿತು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಹೇಶ್ವರ ರಾವ್, ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿಂಧು ಬಿ. ರೂಪೇಶ್, ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಇದ್ದರು.

ಮಕ್ಕಳ ಭವಿಷ್ಯ ಕಾಪಾಡಲು ಪೋಲಿಯೋ ಹಾಕಿಸಿ: ಡಾ. ಜಯಮಾಲಾ

ಉಡುಪಿ: ಮಕ್ಕಳ ಭವಿಷ್ಯ ಆರೋಗ್ಯಕರವಾಗಿರುವ ದೃಷ್ಠಿಯಿಂದ ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಸಚಿವೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ ಹೇಳಿದ್ದಾರೆ. ಅವರು ಭಾನುವಾರ, ಉಡುಪಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪೊಲಿಯೋ ಲಸಿಕೆ ಹಾಕಿ ಮಾತನಾಡಿದರು. ಪೋಲಿಯೋ ಲಸಿಕೆ ಮಕ್ಕಳ ಬದುಕಿಗೆ ಅಮೃತಬಿಂದು ಇದ್ದ ಹಾಗೆ, ಎಲ್ಲಾ ಪೋಷಕರು ತಮ್ಮ ಮಕ್ಕಳಿಗೆ ತಪ್ಪದೇ ಪೋಲಿಯೋ ಹಾಕಿಸಿ ಅವರ ಭವಿಷ್ಯವನ್ನು […]

ಬಾಕಿ ಇರುವ ಕಾಮಗಾರಿಗಳನ್ನು ಶೀಘ್ರ ಮುಗಿಸಿ: ಜಯಮಾಲ

ಉಡುಪಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಾಕಿ ಇರುವ ಎಲ್ಲಾ ಟೆಂಡರ್, ವರ್ಕ್ ಆರ್ಡರ್ ಹಾಗೂ ಇತರ ಎಲ್ಲಾ ಕೆಲಸಗಳನ್ನು ಶೀಘ್ರವಾಗಿ ಪೂರೈಸಿಕೊಳ್ಳುವಂತೆ ಆಯಾ ಇಲಾಖೆ ಮುಖ್ಯಸ್ಥರು ಹಾಗೂ ಜಿಲ್ಲಾಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ ಸೂಚಿಸಿದ್ದಾರೆ. ಅವರು ಬುಧವಾರ ರಜತಾದ್ರಿಯ ಜಿ.ಪಂ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಉಂಟಾಗಿರುವ ಮರಳು ಸಮಸ್ಯೆ ಬಗ್ಗೆ ಚರ್ಚೆ ನಡೆದಿದ್ದು, ಜಿಲ್ಲೆಯಲ್ಲಿ ಮರಳು ದೊರಕುವ ಜಾಗ ಹಾಗೂ ಸಾರ್ವಜನಿಕರು ಮರಳು ಸಿಗಬೇಕಾದರೆ […]