ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವ್ಯವಹಾರ ದಿನ ಆಯೋಜನೆ
ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿನ.12ರಂದು ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಜರುಗಿದ ವ್ಯವಹಾರ ದಿನವನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಉದ್ಘಾಟಿಸಿ, ಕಲಿಕೆಯ ಹಂತದಲ್ಲಿಯೇ ಪ್ರತಿಯೊಬ್ಬ ವಿದ್ಯಾರ್ಥಿ ಭವಿಷ್ಯದ ಯೋಜನೆಗಳನ್ನು ಸ್ವಯಂ ರೂಪಿಸಿಕೊಳ್ಳುವ ಬದ್ಧತೆಯನ್ನು ಹೊಂದಿದರೆ ಬದುಕಿನಲ್ಲಿ ಯಶಸ್ಸು ಸಾಧ್ಯ ಎಂದು ಹೇಳಿದರು. ಶ್ರೀ ವೆಂಕಟರಮಣ ದೇವ್ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ಅಧ್ಯಕ್ಷ ಕೆ. ರಾಮಕೃಷ್ಣ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಮಣಿಪಾಲ್ ಅಕಾಡೆಮಿ ಆಫ್ ಜನರಲ್ ಎಜುಕೇಶನ್ […]
ಉಡುಪಿ ಜಿಲ್ಲೆಯ ಪ್ರಪಥಮ ಉಸ್ತುವಾರಿ ಸಚಿವನಾದದ್ದು ಹೆಮ್ಮೆಯ ವಿಚಾರ: ಕೆ.ಜಯಪ್ರಕಾಶ್ ಹೆಗ್ಡೆ
ಉಡುಪಿ: 1997 ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಬೇರ್ಪಟ್ಟು ಸ್ವತಂತ್ರ ಜಿಲ್ಲೆಯಾಗಿ ಮಾರ್ಪಟ್ಟ ಉಡುಪಿ ಜಿಲ್ಲೆಯ ಪ್ರಪಥಮ ಉಸ್ತುವಾರಿ ಸಚಿವನಾದದ್ದು ನನಗೆ ಹೆಮ್ಮೆ ನೀಡುವ ವಿಷಯ. ಅಂದಿನಿಂದ ಇಂದಿನವರೆಗೆ ಜಿಲ್ಲೆಯಲ್ಲಿ ಸಾಕಷ್ಟು ಪ್ರಗತಿಪರ ಚಟುವಟಿಕೆಗಳು ನಡೆದಿದ್ದು, ಮುಂದೆಯೂ ಕೂಡ ಅನೇಕ ಅಭಿವೃದ್ಧಿ ಕೆಲಸಗಳು ನಡೆಯಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು. ಅವರು ಮಂಗಳವಾರ ನಗರದ ಐ.ಎಮ್.ಎ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲೆಯ […]