ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ: ಉಡುಪಿ-ಚಿಕ್ಕಮಗಳೂರಿಗೆ ಜಯಪ್ರಕಾಶ್ ಹೆಗ್ಡೆ; ದಕ್ಷಿಣ ಕನ್ನಡಕ್ಕೆ ಆರ್. ಪದ್ಮರಾಜ್ ಹೆಸರು ಅಂತಿಮ
ಬೆಂಗಳೂರು: ಕಾಂಗ್ರೆಸ್ ಉಡುಪಿ-ಚಿಕ್ಕಮಗಳೂರಿಗೆ ಜಯಪ್ರಕಾಶ್ ಹೆಗ್ಡೆ ಮತ್ತು ದಕ್ಷಿಣ ಕನ್ನಡಕ್ಕೆ ಆರ್. ಪದ್ಮರಾಜ್ ಹೆಸರನ್ನು ಅಂತಿಮಗೊಳಿಸಲಾಗಿದೆ. ಈ ಎರಡು ಕ್ಷೇತ್ರ ಸೇರಿ 17 ಕ್ಷೇತ್ರಗಳ ಕೈ ಅಭ್ಯರ್ಥಿಗಳ ಹೆಸರು ಅಂತಿಮಗೊಂಡಿದ್ದು, ಇಂದು ಪಟ್ಟಿ ಘೋಷಣೆಯಾಗಲಿದೆ. ಲೋಕಸಭಾ ಚುನಾವಣೆ ಅಭ್ಯರ್ಥಿಗಳ ಆಯ್ಕೆಗೆ ದಿಲ್ಲಿಯಲ್ಲಿ ನಡೆದ ಸಭೆಯಲ್ಲಿ ಚುನಾವಣಾ ಸಮಿತಿ ಬಾಕಿಯಿದ್ದ 21 ಕ್ಷೇತ್ರಗಳ ಪೈಕಿ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಅಂತಿಮಗೊಳಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 21 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ […]