ವಿದ್ಯಾರ್ಥಿಗಳು ಸಮಸ್ಯೆಗೆ ಸ್ಪಂಧಿಸುವ‌ ಗುಣ ಬೆಳೆಸಿಕೊಂಡರೆ ಸಮಾಜದ ಸ್ವಾಸ್ಥ್ಯ ಕಾಪಾಡಲು ಸಾಧ್ಯ: ಜಯಪ್ರಕಾಶ್ ಹೆಗ್ಡೆ

ಉಡುಪಿ: ವಿದ್ಯಾರ್ಥಿ ಸಂಘಟನೆಗಳಿಂದ ನಾಯಕತ್ವದ ತರಬೇತಿ ಸಿಗುತ್ತದೆ. ವಿದ್ಯಾರ್ಥಿ ಸಂಘಟನೆಗಳ ನಡುವೆ ಆರೋಗ್ಯಕರ ಸ್ಪರ್ಧೆ ಇರಬೇಕು. ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜತೆಗೆ ಸಮಸ್ಯೆಗಳಿಗೆ ಸ್ಪಂದಿಸುವ ಗುಣವನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಸಮಾಜದ ಸ್ವಾಸ್ಥ್ಯ ಕಾಪಾಡಲು ಸಾಧ್ಯ ಎಂದು ಮಾಜಿ ಸಂಸದ ಕೆ. ಜಯಪ್ರಕಾಶ್‌ ಹೆಗ್ಡೆ ಹೇಳಿದರು. ಉಡುಪಿ ಕಿದಿಯೂರು ಹೊಟೇಲ್‌ನ ಸಭಾಂಗಣದಲ್ಲಿ ಶನಿವಾರ ದಕ್ಷಿಣ ಕರ್ನಾಟಕ ವಿದ್ಯಾರ್ಥಿ ಪರಿಷತ್‌ ಇದರ ಉಡುಪಿ ಜಿಲ್ಲಾ ಘಟಕವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸ್ಥಳೀಯ, ರಾಜ್ಯ ಹಾಗೂ ದೇಶದ ಸಮಸ್ಯೆಯ ಕುರಿತು ತಿಳುವಳಿಕೆ ಹೊಂದಬೇಕು. […]