ನಾಪತ್ತೆಯಾಗಿ ಮೂರು ತಿಂಗಳು ಕಳೆದರೂ ಪತ್ತೆಯಾಗಿಲ್ಲ ಉಡುಪಿ ಪಬ್ಲಿಕ್ ಪ್ರಾಸಿಕ್ಯೂಟರ್ ತಾಯಿ

ಉಡುಪಿ: ಸಾರ್ವಜನಿಕರಿಗೆ ನ್ಯಾಯ ದೊರಕಿಸಿಕೊಡಲು ಹಗಲಿರುಳು ಶ್ರಮಿಸುವ ಉಡುಪಿಯ ಪಬ್ಲಿಕ್ ಪ್ರಾಸಿಕ್ಯೂಟರ್ ಜಯರಾಮ ಶೆಟ್ಟಿ ಅವರ ತಾಯಿ ಕಳೆದ ಮೂರು ತಿಂಗಳಿನಿಂದ ನಾಪತ್ತೆಯಾಗಿದ್ದು, ಇವರ ಬಗ್ಗೆ ಸುಳಿವು ಇನ್ನೂ ಲಭ್ಯವಾಗಿಲ್ಲ. ಉಡುಪಿ ಜಿಲ್ಲಾ ನ್ಯಾಯಾಲಯದ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿರುವ ಜಯರಾಮ ಶೆಟ್ಟಿಯವರ ತಾಯಿ ವನಜಾ ಶೆಡ್ತಿಯವರು ಬ್ರಹ್ಮಾವರದ ವರಂಬಳ್ಳಿಯಲ್ಲಿ ತಮ್ಮ ಇನ್ನೊಬ್ಬ ಮಗನ ಮನೆಯಲ್ಲಿ ವಾಸವಾಗಿದ್ದು, ನವೆಂಬರ್ 14, 2022 ರಂದು, ಆಕೆ ಏಕಾಏಕಿ ಮನೆಯಿಂದ ಕಾಣೆಯಾಗಿದ್ದಾರೆ. ಜಯರಾಮ್ ಶೆಟ್ಟಿ ಮತ್ತು ಮನೆಯವರು ಆಕೆಗಾಗಿ ಎಲ್ಲಾ ಕಡೆ […]