ಜೆಸಿಬಿ ಮುಂದೆ ನಿತ್ಯಾನಂದ ಒಳಕಾಡು ಘರ್ಜನೆ- ಕಾಂಕ್ರೀಟ್ ರಸ್ತೆ ಅಗೆಯುವ ಪ್ರಕ್ರಿಯೆ ಸ್ಥಗಿತ
ಶಾರದ ಮಂಟಪದಿಂದ ಬೀಡಿನ ಗುಡ್ಡೆ ರಸ್ತೆ ಸುಸ್ಥಿತಿಯಲ್ಲಿದ್ದರೂ ಅದನ್ನು ಅಗೆದು ಕಾಂಕ್ರೀಟೀಕರಣ ಮಾಡಲಾಗುತ್ತಿದೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಒಳಕಾಡು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ಮಾಡಿದ್ದಾರೆ. ವಾಹನ ಸಂಚಾರಕ್ಕೆ ಸದೃಢವಾಗಿರುವ ರಸ್ತೆಯನ್ನು ಅಗೆದು ಮರು ಕಾಂಕ್ರೀಟೀಕರಣ ಮಾಡುವುದು ಸರಿಯಲ್ಲ ಎಂದು ನಗರ ಸಭೆ ಮಾಜಿ ಸದಸ್ಯ ನಿತ್ಯಾನಂದ ವಳಕಾಡು ಜೆಸಿಬಿಗೆ ಅಡ್ಡವಾಗಿ ಕುಳಿತು ಪ್ರತಿಭಟನೆ ಮಾಡಿದರು. ಸ್ಥಳೀಯ ನಗರಸಭೆ ಸದಸ್ಯ ಗಿರೀಶ್ ಅಂಚನ್, ಬಿಜೆಪಿ ಸದಸ್ಯರ ನಡುವೆ ನಿತ್ಯಾನಂದ ವಳಕಾಡು […]