ನಾಲ್ವಡಿ ಕೃಷ್ಣರಾಜ ಒಡೆಯರ್ ಕಾಲೇಜಿನ ಪ್ರಾಂಶುಪಾಲರಿಗೆ ಕಪಾಳಮೋಕ್ಷ ಮಾಡಿದ ಜನತಾದಳ ಶಾಸಕ ಎಂ ಶ್ರೀನಿವಾಸ್
ಬೆಂಗಳೂರು: ನಾಲ್ವಡಿ ಕೃಷ್ಣ ರಾಜ ಒಡೆಯರ್ ಐಟಿಐ ಕಾಲೇಜಿನಲ್ಲಿ ನಡೆಯುತ್ತಿರುವ ಕಂಪ್ಯೂಟರ್ ಲ್ಯಾಬ್‌ನ ಅಭಿವೃದ್ಧಿ ಕಾಮಗಾರಿಯ ಬಗ್ಗೆ ಸರಿಯಾದ ಉತ್ತರ ನೀಡಲು ಸಾಧ್ಯವಾಗದಿದ್ದುದಕ್ಕಾಗಿ ಮಂಡ್ಯದ ಜೆಡಿಎಸ್ ಶಾಸಕ ಶ್ರೀನಿವಾಸ್, ತಮ್ಮ ಸಹೋದ್ಯೋಗಿಗಳ ಮುಂದೆ ಕಾಲೇಜು ಪ್ರಾಂಶುಪಾಲರೊಬ್ಬರಿಗೆ ಪದೇ ಪದೇ ಕಪಾಳಮೋಕ್ಷ ಮಾಡಿದ್ದಾರೆ. ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶ್ರೀನಿವಾಸ್ ಪ್ರಾಂಶುಪಾಲರನ್ನು ಅವಮರ್ಯಾದೆಯಿಂದ ನಡೆಸಿಕೊಂಡಿದ್ದಾರೆ ಎಂದು ಹಲವರು ಕಿಡಿಕಾರಿದ್ದಾರೆ. ನವೀಕೃತ ಐಟಿಐ ಕಾಲೇಜು ಉದ್ಘಾಟನೆ ವೇಳೆ ಪ್ರಾಂಶುಪಾಲ ನಾಗನಾದ್ ಅವರು ಪ್ರಯೋಗಾಲಯದಲ್ಲಿ ನಡೆಯುತ್ತಿರುವ ಕಾಮಗಾರಿಗಳ ಬಗ್ಗೆ […]
ಎಂ ಎಲ್ ಸಿ ಚುನಾವಣೆ : ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಗೆಲುವು
ಬೆಂಗಳೂರು: ಕರ್ನಾಟಕದ ಪಶ್ಚಿಮ ಶಿಕ್ಷಕರ ಕ್ಷೇತ್ರದ ಎಂಎಲ್‌ಸಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಎಂಎಲ್‌ಸಿ ಚುನಾವಣೆಯಲ್ಲಿ ಸತತ 8 ಬಾರಿ ಗೆದ್ದ ದೇಶದ ಮೊದಲ ಎಂಎಲ್‌ಸಿ ಎನ್ನುವ ಹೆಗ್ಗಳಿಕೆಗೆ ಹೊರಟ್ಟಿ ಪಾತ್ರವಾಗಿದ್ದಾರೆ. ಇನ್ನೂ 3 ಸ್ಥಾನಗಳಿಗೆ ಕೌಟಿಂಗ್ ನಡೆಯುತ್ತಿದ್ದು, ಕರ್ನಾಟಕದ ಮೇಲ್ಮನೆಯಲ್ಲಿ ಬಿಜೆಪಿ ಬಹುಮತದತ್ತ ಸಾಗುತ್ತಿದೆ.
ಬಿಜೆಪಿಯ ‘ಬಿ’ ಟೀಂ ಕಾಂಗ್ರೆಸ್: ಎಚ್.ಡಿ ಕುಮಾರಸ್ವಾಮಿ
ಬೆಂಗಳೂರು: ರಾಜ್ಯಸಭೆ ಚುನಾವಣೆಯ ಮತದಾನ ಪ್ರಕ್ರಿಯೆಯಲ್ಲಿ ಜೆಡಿಎಸ್ ಪಕ್ಷದ ಸದಸ್ಯರು ಕಾಂಗ್ರೆಸ್ ಗೆ ಮತ ಹಾಕಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ” ಶ್ರೀನಿವಾಸಗೌಡ ಕಾಂಗ್ರೆಸ್‌ಗೆ ಮತ ಹಾಕುತ್ತಾರೆ ಎಂದು ಹೇಳಿದ್ದೆ. ಎಸ್‌ಆರ್ ಶ್ರೀನಿವಾಸ್ ಕೂಡ ಜೆಡಿಎಸ್‌ಗೆ ಮತ ಹಾಕಿಲ್ಲ. ಕಾಂಗ್ರೆಸ್ ಇಂದು ತನ್ನ ನಿಜವಾದ ಮುಖವನ್ನು ತೋರಿಸಿದೆ. ಬಿಜೆಪಿಯ ‘ಬಿ’ ಟೀಂ ಕಾಂಗ್ರೆಸ್. ದೇಶದಲ್ಲಿ ಬಿಜೆಪಿ ಬೆಳೆಯಲು ಅವರೇ ಮುಖ್ಯ ಕಾರಣಕರ್ತರು” ಎಂದು ಮಾಧ್ಯಮಗಳೆದುರು ಹೇಳಿಕೊಂಡಿದ್ದಾರೆ. ಮಾಧ್ಯಮ ಪ್ರತಿನಿಧಿಗಳು ಈ ಬಗ್ಗೆ […]
ರಾಜ್ಯದಲ್ಲಿ ರೆಸಾರ್ಟ್ ರಾಜಕೀಯ: ‘ಅಡ್ಡ ಮತದಾನ’ದ ಭಯದಿಂದ ಶಾಸಕರನ್ನು ಹೋಟೆಲ್‌ಗೆ ಸ್ಥಳಾಂತರಿಸಿದ ಜನತಾ ದಳ
ಬೆಂಗಳೂರು: ರಾಜ್ಯಸಭಾ ಚುನಾವಣೆಗೂ ಮುನ್ನಿನ ರೆಸಾರ್ಟ್ ರಾಜಕಾರಣ ರಾಜ್ಯದ ಅಂಗಳಕ್ಕೂ ಕಾಲಿಟ್ಟಿದೆ. ಮಹಾರಾಷ್ಟ್ರ ಮತ್ತು ರಾಜಸ್ಥಾನದಲ್ಲಿ ‘ಹೋಟೆಲ್ ರಾಜಕೀಯ’ದ ಸೂಚನೆಯ ನಂತರ, ಜನತಾ ದಳ (ಜಾತ್ಯತೀತ) ತನ್ನ ಎಲ್ಲಾ 32 ಶಾಸಕರನ್ನು ಬೆಂಗಳೂರಿನ 5-ಸ್ಟಾರ್ ಹೋಟೆಲ್‌ಗೆ ಸ್ಥಳಾಂತರಿಸಿದೆ. ರಾಜ್ಯದಿಂದ ನಾಲ್ಕನೇ ಮತ್ತು ಕೊನೆಯ ಸ್ಥಾನಕ್ಕಾಗಿ ಪೈಪೋಟಿಯು ಬಿಗಿಯಾಗಿರುವ ಹೊತ್ತಿನಲ್ಲಿ ಈ ಬೆಳವಣಿಗೆ ಕಂಡುಬಂದಿದೆ. ಜೆಡಿಎಸ್ ತನ್ನ ಅಭ್ಯರ್ಥಿಯ ಗೆಲುವನ್ನು ಖಚಿತಪಡಿಸಿಕೊಳ್ಳಲು ಕಾಂಗ್ರೆಸ್‌ನ ಬೆಂಬಲವನ್ನು ಕೋರುವುದನ್ನು ಮುಂದುವರೆಸಿದರೆ, ಮತ್ತೊಂದೆಡೆ ಕಾಂಗ್ರೆಸ್ ಸಹ ಜೆಡಿಎಸ್ ನ ಎಲ್ಲಾ 32 ಶಾಸಕರ […]
ಬೀದಿ ನಾಟಕದ ಮೂಲಕ ‘ಮೆಟಡೋರ್’ ಸಿನಿಮಾ ಟ್ರೇಲರ್ ಬಿಡುಗಡೆ
ಚಿಕ್ಕಮಗಳೂರು: ನಗರದ ಆಜಾದ್‌ಪಾರ್ಕ್ ನಲ್ಲಿ ವಿಭಿನ್ನವಾಗಿ ಬೀದಿ ನಾಟಕದ ಮೂಲಕ ಜಿಲ್ಲೆಯ ಸ್ಥಳೀಯ ನಿವಾಸಿಯೊಬ್ಬರು ನಿರ್ಮಾಣ ಮಾಡಿರುವ ‘ಮೆಟ ಡೋರ್’ ಸಿನಿಮಾದ ಟ್ರೇಲರ್ ಅನ್ನು ಮಾಜಿ ವಿಧಾನ ಪರಿಷತ್ ಸದಸ್ಯೆ ಎ.ವಿ.ಗಾಯತ್ರಿ ಶಾಂತೇಗೌಡ ಬುಧವಾರ ಬಿಡುಗಡೆಗೊಳಿಸಿದರು. ನಂತರ ಮಾತನಾಡಿದ ಅವರು ಸಖರಾಯಪಟ್ಟಣದ ನಿವಾಸಿಯಾದ ಕಿರಣ್ ಅವರು ನಾಯಕ ನಟನಾಗಿ ಹಾಗೂ ಚಿತ್ರದ ನಿರ್ಮಾಣದ ಜವಾಬ್ದಾರಿ ಹೊತ್ತು ಮೆಟಡೋರ್ ಎಂಬ ಸಿನಿಮಾವನ್ನು ನಿರ್ಮಿಸಿದ್ದಾರೆ. ಸಿನಿಮಾದಲ್ಲಿ ಸಾಮಾಜಿಕ ಕಳಕಳಿಯುಳ್ಳ ಸಂದೇಶಗಳನ್ನು ಅಳವಡಿಸಲಾಗಿದ್ದು ಚಿತ್ರ ಉತ್ತಮ ರೀತಿಯಲ್ಲಿ ಮೂಡಿ ಬರಲಿದೆ ಎಂದರು. […]