ಸಚಿವನಾಗಿ ಉತ್ತಮ ಕಾರ್ಯ ನಿರ್ವಹಿಸಿದ್ದೇನೆ: ಖಾದರ್
ಮಂಗಳೂರು: ವಿಶ್ವಾಸ ಮತಯಾಚನೆಯಲ್ಲಿ ನಮಗೆ ಸೋಲಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದನ್ನು ಸಕಾರಾತ್ಮಕವಾಗಿ ಸ್ವೀಕರಿಸುತ್ತೇನೆ. ಸಚಿವನಾಗಿ ಉತ್ತಮ ಕಾರ್ಯ ಮಾಡಿದ್ದೇನೆ ಎಂದು ಮಾಜಿ ಸಚಿವ ಯು.ಟಿ. ಖಾದರ್ ಹೇಳಿದರು. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿಶೇಷ ಅನುದಾನವನ್ನು ಜಿಲ್ಲೆಗೆ ತಂದಿದ್ದೇನೆ. ಪ್ರಕೃತಿ ವಿಕೋಪ ಸಂದರ್ಭದಲ್ಲಿ ಒಂದೊಂದು ಕ್ಷೇತ್ರಕ್ಕೆ ೬ ಕೋಟಿ ಅನುದಾನ ಬಿಡುಗಡೆಯಾಗಿದೆ. ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡಿ, ಲೈವ್ ಬ್ಯಾಂಡ್, ಇಸ್ವಿಟ್ ಇವುಗಳನ್ನು ಬಂದ್ ಮಾಡಿಸಿದ್ದೇನೆ. ಕಳೆದ ಒಂದು ವರ್ಷದಿಂದ ಮರಳು ಮಾಫಿಯಾದ ವಿರುದ್ಧ ಕ್ರಮಕೈಗೊಂಡಿದ್ದೇನೆ. […]
ವಿಶ್ವಾಸ ಮತಕ್ಕೆ ಸೋಲು: ರಾಜ್ಯದಲ್ಲಿ ಮೈತ್ರಿ ಸರಕಾರ ಪತನ
ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡು ವಾರಗಳಿಂದ ನಡೆಯುತ್ತಿದ್ದ ರಾಜಕೀಯ ಜಂಗಿ ಕುಸ್ತಿಗೆ ಕಾರಣವಾಗಿದ್ದ ವಿಧಾನ ಸಭೆಯಲ್ಲಿ ಕೊನೆಗೂ ಮಂಗಳವಾರ ಸಂಜೆ ವಿಶ್ವಾಸ ಮತ ಪರ ವಿರುದ್ಧ ನಡೆದ ಚರ್ಚೆ ಬಳಿಕ ನಡೆದ ಮತದಾನ ಪ್ರಕ್ರಿಯೆಯಲ್ಲಿ ಸಮ್ಮಿಶ್ರ ಸರಕಾರಕ್ಕೆ ಸೋಲಾಗಿದ್ದು, ಕುಮಾರ ಸ್ವಾಮಿ ನೇತೃತ್ವದ ದೋಸ್ತಿ ಸರಕಾರ ಪತನಗೊಂಡಿದೆ. ಆ ಮೂಲಕ ದೋಸ್ತಿ ಸರಕಾರ ಒಂದು ವರ್ಷದ ಆಡಳಿತ ಕೊನೆಗೊಂಡಿದೆ. ವಿಶ್ವಾಸ ಮತದಾನದ ಚರ್ಚೆಯ ಸಂದರ್ಭ ಒಂದು ಹಂತದಲ್ಲಿ ಸಿಎಂ ತಾನು ರಾಜೀನಾಮೆ ನೀಡುವುದಾಗಿ ಪ್ರಕಟಿಸಿದರು. ಆದರೆ ಕೊನೆಗೆ […]
ದೋಸ್ತಿ ಸರ್ಕಾರದ ಎಲ್ಲಾ ಸಚಿವರ ರಾಜೀನಾಮೆ…!
ಬೆಂಗಳೂರು: ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ದಿನೇಶ್ ಗುಂಡೂರಾವ್, ಡಿಕೆಶಿ ಮೊದಲಾದ ಪ್ರಮುಖ ನಾಯಕರ ಉಪಸ್ಥಿತಿಯಲ್ಲಿ ನಡೆದ ಸಭೆ ನಡೆದಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್‌ನ ಎಲ್ಲಾ ಸಚಿವರು ರಾಜೀನಾಮೆಗೆ ಮುಂದಾಗಿದ್ದಾರೆ. ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಕಾಂಗ್ರೆಸ್ ಪಕ್ಷದ 22 ಸಚಿವರು ಹಾಗೂ ಜೆಡಿಎಸ್ ಪಕ್ಷದ 9 ಸಚಿವರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಈ ಮೂಲಕ ದೋಸ್ತಿಗಳು ಸರ್ಕಾರ ಉಳಿಸಿಕೊಳ್ಳಲು ಕೊನೆಯ ಅಸ್ತ್ರ ಪ್ರಯೋಗಿಸಲಾಗಿದೆ. ಸಿಎಂ ಕುಮಾರಸ್ವಾಮಿ ಕೈಗೆ ಸಚಿವರು ರಾಜೀನಾಮೆ ಪತ್ರ ನೀಡಲಿದ್ದು, ಬಳಿಕ […]
ಬಿಜೆಪಿ ಸರ್ಕಾರ ಮಾಡಿದರೆ ನಮ್ಮ ಅಭ್ಯಂತರವಿಲ್ಲ: ರೋಶನ್ ಬೇಗ್
ಬೆಂಗಳೂರು ಜು. 07: ಬಿಜೆಪಿ ಸರ್ಕಾರ ರಚನೆ ಮಾಡಿದರೆ ನಮ್ಮ ಅಭ್ಯಂತರವಿಲ್ಲ. ನಮ್ಮ ಆಂತರಿಕ ಕಚ್ಚಾಟದಿಂದ ಹೀಗಾಗಿದೆ. ಎಂದು ಕಾಂಗ್ರೆಸ್ ಅಮಾನತು ಶಾಸಕ ರೋಶನ್ ಬೇಗ್ ಹೇಳಿದ್ದಾರೆ. ನಾನು ರಾಜೀನಾಮೆ ಕೊಡೋದಾದ್ರೆ ಹೇಳಿಯೇ ಕೊಡ್ತೀನಿ. ನನಗೆ ಅಸಮಾಧಾನ ಇರೋದು ನಿಜ. ರಾಮಲಿಂಗಾರೆಡ್ಡಿ ಅವರಿಗೇ ಪಕ್ಷದಲ್ಲಿ ಸ್ಥಾನ ಮಾನ ಇಲ್ಲ. ಇದಕ್ಕೆಲ್ಲ ಕಾರಣ ನಾನು ಅಂದು ಪ್ರಸ್ತಾಪ ಮಾಡಿದ್ದ ಹೆಸರುಗಳೇ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಮೇಲೆ ವಾಗ್ದಾಳಿ ಮಾಡಿದರು. ನಾನು ಅವತ್ತು ಸಿದ್ದರಾಮಯ್ಯ ವಿರುದ್ಧ ಮಾತಾಡಿದೆ ಅಂತ ಸಸ್ಪೆಂಡ್ […]
ಕಾಂಗ್ರೆಸ್ ಉಳಿಸಲು ಈ ನಿರ್ಧಾರ: ಗೆದ್ದು ರಾಜಧರ್ಮ ಪಾಲಿಸುತ್ತೇನೆ: ಪ್ರಮೋದ್ ಮಧ್ವರಾಜ್
ಉಡುಪಿ: ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್- ಜೆಡಿಎಸ್ ಹಾಲು ಜೇನಿನಂತೆ ಬೆರೆಯಲಿದೆ. ನಾನು ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಆದರೆ ಮೈತ್ರಿ ಧರ್ಮದಂತೆ ಜೆಡಿಎಸ್ ಅಭ್ಯರ್ಥಿ ಯಾಗಿ ಕಾಂಗ್ರೆಸ್ ಪರವಾಗಿ ಸ್ಪರ್ಧಿಸುತ್ತಿದ್ದೇನೆ ಎಂದು ಮಾಜಿ ಸಚಿವ, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಹೇಳಿದರು. ಶುಕ್ರವಾರ ಉಡುಪಿ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಮನೆಗೆ ಹೋಗುವ ಮೊದಲು ಕಾಂಗ್ರೆಸ್ ಕಚೇರಿಗೆ ಭೇಟಿ ಕೊಟ್ಟಿದ್ದೇನೆ. ಕಾಂಗ್ರೆಸ್ ಪಕ್ಷ ಉಳಿಸಲು ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಗೆದ್ದು ಬಂದರೆ ರಾಜಧರ್ಮ ಪಾಲಿಸುತ್ತೇನೆ ಎಂದರು. ಮಾರ್ಚ್ 25 ಕ್ಕೆ ನಾಮಪತ್ರ […]