ಜಿಲ್ಲೆಯಲ್ಲಿ ಜೆಇ ಲಸಿಕೆ ಅಭಿಯಾನ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ
ಉಡುಪಿ: ಮಕ್ಕಳಲ್ಲಿ ಮೆದುಳು ಜ್ವರದ ಮಾದರಿಯಲ್ಲಿ ಕಂಡು ಬರುವ ಜೆಇ (ಜಪಾನಿಸ್ ಎನ್‌ಸೆಫಲಿಟಿಸ್) ವೈರಸ್‌ನಿಂದ ಆಗುವ ವಿವಿಧ ಆರೋಗ್ಯ ಸಮಸ್ಯೆಗಳನ್ನು ತಡೆಯಲು ಜಿಲ್ಲೆಯಲ್ಲಿನ 1 ರಿಂದ 15 ವರ್ಷದೊಳಗಿನ 2,06,730 ಮಕ್ಕಳಿಗೆ ಲಸಿಕೆ ನೀಡಲು ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಅಜ್ಜರಕಾಡು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ, ಜೆಇ ಲಸಿಕೆ ಕಾರ್ಯಕ್ರಮದ ಕುರಿತು ನಡೆದ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಸಭೆಯ ಅಧ್ಯಕ್ಷತೆ […]