ಉಚಿತ ಆರೋಗ್ಯ ತಪಾಸಣಾ ಶಿಬಿರ
ಉಡುಪಿ: ಜಿಲ್ಲಾ ಆಸ್ಪತ್ರೆ ಉಡುಪಿಯಲ್ಲಿ ಮಾರ್ಚ್ 28 ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಎನ್.ಪಿ.ಸಿ.ಡಿ.ಸಿ.ಎಸ್ ಹಾಗೂ ಎನ್.ಟಿ.ಸಿ.ಪಿ ಕಾರ್ಯಕ್ರಮದಡಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಇವರ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಜಿಲ್ಲಾ ಆಸ್ಪತ್ರೆಯ ಹಿರಿಯ ನಾಗರಿಕರ ವಾರ್ಡ್ನಲ್ಲಿ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕರ ಪ್ರಕಟಣೆ ತಿಳಿಸಿದೆ.