ಉಡುಪಿಯಲ್ಲಿ ಜು. 2ರಿಂದ ರಾಷ್ಟ್ರಮಟ್ಟದ ಬ್ಯಾಡ್ಮಿಂಟನ್ ಟೂರ್ನಮೆಂಟ್
ಉಡುಪಿ: ಉಡುಪಿ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಶನ್ ನೇತೃತ್ವದಲ್ಲಿ 13 ವರ್ಷದೊಳಗಿನ ಬಾಲಕ–ಬಾಲಕಿಯರ ಅಖಿಲ ಭಾರತ ಸಬ್ ಜ್ಯೂನಿಯರ್ ರ್ಯಾಂಕಿಂಗ್ ರಾಷ್ಟ್ರಮಟ್ಟದ ಬ್ಯಾಡ್ಮಿಂಟನ್ ಟೂರ್ನಮೆಂಟ್–2019 ಇಲ್ಲಿನ ಅಜ್ಜರಕಾಡು ಒಳಾಂಗಣ ಕ್ರೀಡಾಂಗಣ ಹಾಗೂ ಮಣಿಪಾಲದ ಮರಿನಾ ಕ್ರೀಡಾಂಗಣದಲ್ಲಿ ಜು. 2ರಿಂದ 7ರ ವರೆಗೆ ನಡೆಯಲಿದೆ ಎಂದು ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಶನ್ ಅಧ್ಯಕ್ಷ, ಶಾಸಕ ಕೆ. ರಘುಪತಿ ಭಟ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಟೂರ್ನಿಯಲ್ಲಿ ನಮ್ಮ ದೇಶವನ್ನು ಪ್ರತಿನಿಧಿಸುವ ಆಟಗಾರರು ಸಹಿತ ವಿವಿಧ ರಾಜ್ಯಗಳ ಅಗ್ರ ಶ್ರೇಯಂಕಿತ 1 ಸಾವಿರ ಆಟಗಾರರು […]