ಬ್ರಹ್ಮಾವರ: 94 ಸಿಸಿ ಅರ್ಜಿಗಳನ್ನು ಆದ್ಯತೆ ಮೇಲೆ ವಿಲೇವಾರಿ ಮಾಡಲು ಜಿಲ್ಲಾಧಿಕಾರಿ ಸೂಚನೆ
ಬ್ರಹ್ಮಾವರ: ತಾಲೂಕು ವ್ಯಾಪ್ತಿಯಲ್ಲಿ ಸಲ್ಲಿಕೆಯಾಗಿರುವ 94 ಸಿಸಿ ಕುರಿತ ಅರ್ಜಿಗಳನ್ನು ಆದಷ್ಟು ಶೀಘ್ರದಲ್ಲಿ ವಿಲೇ ಮಾಡುವಂತೆ ತಹಸೀಲ್ದಾರ್ ಅವರಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು. ಅವರು ಮಂಗಳವಾರ ಕಚ್ಚೂರು ಮಾಲ್ತಿದೇವಿ ಸಭಾಭವನದಲ್ಲಿ ನಡೆದ, ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ಸಾರ್ವಜನಿಕರು 94 ಸಿಸಿ ಹಾಗೂ ನಿವೇಶನ ನೀಡುವ ಕುರಿತು ಸಲ್ಲಿಸಿದ್ದ ಅರ್ಜಿಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ವಸತಿ ಮತ್ತು ನಿವೇಶನ ಕುರಿತು ಸಲ್ಲಿಕೆಯಾಗಿರುವ […]
ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ಉತ್ತಮ ಜನಸ್ಪಂದನೆ
ಕುಂದಾಪುರ: ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಅವರ ಗ್ರಾಮಗಳಿಗೆ ತೆರಳಿ, ಅರಿತು ಅವುಗಳಿಗೆ ಸೂಕ್ತ ಪರಿಹಾರ ಒದಗಿಸುವ ಮತ್ತು ಸರಕಾರದ ವಿವಿಧ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ಜಿಲ್ಲೆಯಾದ್ಯಂತ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಜ.21 ರಂದು ನಾಗೂರಿನಶ್ರೀ ಲಲಿತ ಕೃಷ್ಣ ಕಲಾಮಂದಿರದಲ್ಲಿ ನಡೆದ ಕಿರಿಮಂಜೇಶ್ವರ ಗ್ರಾಮ ವ್ಯಾಪ್ತಿಯ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾಧಿಕಾರಿಗಳ […]
ಬೈಂದೂರು: ಜ. 21 ರಂದು ಕಿರಿಮಂಜೇಶ್ವರದಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ
ಉಡುಪಿ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿಗಳು ಜನವರಿ 21 ರಂದು ಬೆಳಗ್ಗೆ 11 ಗಂಟೆಗೆ ಬೈಂದೂರು ತಾಲೂಕು ಕಿರಿಮಂಜೇಶ್ವರ ಗ್ರಾಮದ ನಾಗೂರು ಒಡೆಯರ ಮಠ ಶ್ರೀ ಕೃಷ್ಣ ಲಲಿತ ಕಲಾಮಂದಿರದ ಇಲ್ಲಿ ಗ್ರಾಮ ವಾಸ್ತವ್ಯ ನಡೆಸಲಿದ್ದು, ಸದ್ರಿ ಗ್ರಾಮಕ್ಕೆ ಒಳಪಡುವ ಗ್ರಾಮಸ್ಥರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ಗ್ರಾಮದ ಗ್ರಾಮ ಕರಣಿಕರ ಕಚೇರಿಗೆ ನೀಡುವಂತೆ ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಇದರ ಸದುಪಯೋಗಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ವಾರಾಹಿ ಎಡದಂಡೆ ಯೋಜನೆಯಿಂದ ಜನರಿಗಾಗುತ್ತಿರುವ ತೊಂದರೆ ತಕ್ಷಣ ಬಗೆಹರಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.
ಉಡುಪಿ: ಹಾರ್ದಳ್ಳಿ-ಮಂಡಳ್ಳಿ ಗ್ರಾಮ ವ್ಯಾಪ್ತಿಯಲ್ಲಿ ಹಾದು ಹೋಗಿರುವ ವಾರಾಹಿ ಎಡದಂಡೆ ಕಾಮಗಾರಿಯಿಂದ ಸ್ಥಳೀಯರಿಗೆ ಸಂಪರ್ಕ ರಸ್ತೆ ಸಮಸ್ಯೆ ಸೇರಿದಂತೆ ಮತ್ತಿತರ ಸಮಸ್ಯೆಗಳ ಬಗ್ಗೆ ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು. ಅವರು ಶನಿವಾರ ಬಿದ್ಕಲ್‌ಕಟ್ಟೆಯ ಕೆ.ಪಿ.ಎಸ್. ಶಾಲೆಯಲ್ಲಿ ನಡೆದ ಹಾರ್ದಳ್ಳಿ-ಮಂಡಳ್ಳಿ ಗ್ರಾಮ ವ್ಯಾಪ್ತಿಯ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಾರಾಹಿ ಎಡದಂಡೆ ಕಾಮಗಾರಿಯ ಕಾರಣ ಗ್ರಾಮದಲ್ಲಿ ಹಲವೆಡೆ ಸಂಪರ್ಕ ರಸ್ತೆಗಳ ಸಮಸ್ಯೆ ಉಂಟಾಗಿದೆ. ಈ ಬಗ್ಗೆ ವಾರಾಹಿ […]
ಸರಕಾರಿ ಅಧಿಕಾರಿಗಳ ಗ್ರಾಮವಾಸ್ತವ್ಯ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಿ: ಜಿಲ್ಲಾಧಿಕಾರಿ ಕೂರ್ಮಾ ರಾವ್
ಉಡುಪಿ: ಸರಕಾರವು ಸಾರ್ವಜನಿಕರ ಅಭಿವೃದ್ದಿಗಾಗಿ ಜಾರಿಗೆ ತಂದಿರುವ ವಿವಿಧ ಯೋಜನೆಗಳ ಮಾಹಿತಿಯನ್ನು ಸಾರ್ವಜನಿಕರು ಪಡೆದುಕೊಂಡು ಆ ಯೋಜನೆಗಳ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಮೂಲಕ ಹಲವು ಯೋಜನೆಗಳ ಸಮಗ್ರ ಮಾಹಿತಿ ಪಡೆಯಲು ಹಾಗೂ ಸ್ಥಳೀಯ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಪಡೆಯಲು ಸಾಧ್ಯ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಶನಿವಾರದಂದು ಕಾಪು ತಾಲೂಕಿನ ಬೆಳ್ಳೆ ಗ್ರಾಮದ ಗೀತಾ ಮಂದಿರದಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ ಗ್ರಾಮಸ್ಥರ […]