ನ. 19 ರಂದು ಬೆಳ್ಳೆ ಗ್ರಾಮದಲ್ಲಿ ಡಿಸಿ ಗ್ರಾಮ ವಾಸ್ತವ್ಯ
ಉಡುಪಿ: ಕಾಪು ತಾಲೂಕಿನ ಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳ್ಳೆ ಗ್ರಾಮದ ಗೀತಾಮಂದಿರ ಇಲ್ಲಿ ನವೆಂಬರ್ 19 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ನಡೆಯಲಿದ್ದು, ಬೆಳ್ಳೆ ಗ್ರಾಮಕ್ಕೆ ಒಳಪಡುವ ಗ್ರಾಮಸ್ಥರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ಗ್ರಾಮದ ಗ್ರಾಮಕರಣಿಕರ ಕಚೇರಿಗೆ ನೀಡುವಂತೆ ಹಾಗೂ ಗ್ರಾಮಸ್ಥರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನವೆಂಬರ್ 19 ರಂದು ಇರ್ವತ್ತೂರಿನಲ್ಲಿ ಕಾರ್ಕಳ ತಹಶೀಲ್ದಾರ್ ಗ್ರಾಮವಾಸ್ತವ್ಯ
ಉಡುಪಿ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಕಾರ್ಕಳ ತಾಲೂಕು ತಹಶೀಲ್ದಾರರು ನವೆಂಬರ್ 19 ರಂದು ಇರ್ವತ್ತೂರು ಗ್ರಾಮದ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಗ್ರಾಮವಾಸ್ತವ್ಯ ನಡೆಸಲಿದ್ದು, ಇರ್ವತ್ತೂರು ಗ್ರಾಮದ ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಕಾರ್ಕಳ ತಹಶೀಲ್ದಾರರ ಪ್ರಕಟಣೆ ತಿಳಿಸಿದೆ.
ಪಹಣಿಪತ್ರವಿಲ್ಲದೆ ಪರದಾಡುತ್ತಿರುವ ಹಳ್ಳಿಹೊಳೆ ಕೃಷಿಕರು: ಜಿಲ್ಲಾಧಿಕಾರಿ ಮುಂದೆ ಅಹವಾಲು ತೋಡಿಕೊಂಡ ಗ್ರಾಮಸ್ಥರು
ಉಡುಪಿ: ಹಳ್ಳಿಹೊಳೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಭಾಂಗಣದಲ್ಲಿ ನಡೆದ, ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಜಿಲ್ಲಾಧಿಕಾರಿ ಕೂರ್ಮಾ ರಾವ್, ಬೈಂದೂರು ತಾಲೂಕು ವ್ಯಾಪ್ತಿಯ ಅತ್ಯಂತ ಕುಗ್ರಾಮಗಳಲ್ಲಿ ಒಂದಾದ ಹಳ್ಳಿಹೊಳೆ ಗ್ರಾಮದಲ್ಲಿ ಸಾರ್ವಜನಿಕರಿಗೆ ಅಗತ್ಯವಿರುವ ವಿವಿಧ ಮೂಲಭೂತ ಸೌಕರ್ಯಗಳನ್ನು ಆದ್ಯತೆಯ ಮೇರೆಗೆ ಒದಗಿಸುವಂತೆ ಎಲ್ಲ ಇಲಾಖೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು. ಈ ಭಾಗದಲ್ಲಿ ಕಾಡುಪ್ರಾಣಿಗಳ ಹಾವಳಿ, ನೆಟ್‌ವರ್ಕ್ ಸಮಸ್ಯೆ, ಕಾಲುಸಂಕದ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ ಸಾರ್ವಜನಿಕರು, […]
ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ನೀಡಲು ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ: ಜಿಲ್ಲಾಧಿಕಾರಿ
ಉಡುಪಿ: ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸುವ ಉದ್ದೇಶದಿಂದ ಜಿಲ್ಲಾಡಳಿತವು ಹಳ್ಳಿಗೆ ಭೇಟಿ ನೀಡಿದೆ. ಜನರು ಇದರ ಲಾಭ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಹೆಬ್ರಿ ತಾಲೂಕಿನ ವರಂಗ ಗ್ರಾಮ ವ್ಯಾಪ್ತಿಯ ಮುನಿಯಾಲಿನ ವೆಂಕಟರಮಣ ದೇವಸ್ಥಾನದ ಆವರಣದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಗರದಿಂದ ದೂರವಿರುವ ಗ್ರಾಮೀಣ ಪ್ರದೇಶದ ಜನರು ವಾಸವಾಗಿರುವ ಸ್ಥಳಕ್ಕೆ ಅಧಿಕಾರಿಗಳು ಹೋಗಿ ಅವರ ಸಮಸ್ಯೆಗಳನ್ನು […]