ಮಂಗಳೂರು: ಜಿ.ಪಂ ಅಧ್ಯಕ್ಷೆ ವಿರುದ್ಧ ಪ್ರಕರಣ ದಾಖಲು
ಮಂಗಳೂರು: ಸರಕಾರಿ ವೈದ್ಯರನ್ನು ನಿಂದಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆಗೆ ಸಂಬಂಧಿಸಿ ದ.ಕ. ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸ್ ದೌರ್ಜನ್ಯಕ್ಕೆ ಒಳಗಾಗಿದ್ದ ಕುಟುಂಬವನ್ನು ನೋಡಲು ತೆರಳಿದ್ದ ಅಧ್ಯಕ್ಷೆ ಸರಕಾರಿ ಆಸ್ಪತ್ರೆ ಯಲ್ಲಿ ವೈದ್ಯರನ್ನು ನಿಂದಿಸಿದ್ದು, ಆ ವೀಡಿಯೋ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ವೈದ್ಯೆ ಡಾ.ಅರ್ಚನಾ ಅವರು ಪುತ್ತೂರು ನಗರ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಸಾರ್ವಜನಿಕರಿಗೆ ಸರಿಯಾಗಿ ಲಭಿಸದ ಆಧಾರ್; ಜಿ.ಪಂ. ಸಾಮಾನ್ಯ ಸಭೆಯಲ್ಲಿ ಸದಸ್ಯರ ಆಕ್ರೋಶ
ಉಡುಪಿ, ಜೂ.25: ಆಧಾರ್ ಕಾರ್ಡ್ ಸೇವೆ ಸಾರ್ವಜನಿಕರಿಗೆ ಸರಿಯಾಗಿ ಸಿಗದೇ ತೀವ್ರ ಸಮಸ್ಯೆ ಉಂಟಾಗಿದೆ ಎಂದು ಜಿ.ಪಂ. ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಜಿ.ಪಂ.ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿ.ಪಂ ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆಯಲ್ಲಿ ನಡೆದ 16ನೇ ಜಿಲ್ಲಾ ಪಂ. ಸಾಮಾನ್ಯ ಸಭೆಯಲ್ಲಿ ಆಧಾರ್‌ಕಾರ್ಡ್ ಸಮಸ್ಯೆ ಕುರಿತು ಚರ್ಚೆ ನಡೆಯಿತು. ಜಿಲ್ಲೆಯ ಎಲ್ಲಾ ಗ್ರಾ.ಪಂ.ಗಳಲ್ಲಿ ಸಾಫ್ಟವೇರ್ ಸಮಸ್ಯೆ ಉಂಟಾಗಿದೆ ಎನ್ನುವ ಕಾರಣ ನೀಡಿದ್ದು, ಆಧಾರ್ ಸೇವೆ ಸ್ಥಗಿತಗೊಂಡಿದೆ. ತಾಲೂಕು ಕಚೇರಿ, ಅಂಚೆ ಕಚೇರಿಯಲ್ಲಿಯೂ ಸರಿಯಾದ ಸೇವೆ […]