ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗೆ ಶಿಕ್ಷೆ

ಉಡುಪಿ: ಸರ್ಕಾರಿ ನೌಕರರಿಗೆ ಕರ್ತವ್ಯ ನಿರ್ವಹಿಸಲು ಅಡ್ಡಿಪಡಿಸಿದ ಆರೋಪಿಗೆ ನಗರದ ಪ್ರಧಾನ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. ಉಡುಪಿ ತಾಲೂಕು ಬೆಳ್ಳಂಪಳ್ಳಿ ಗ್ರಾಮದ ಕಂಬ್ಲ ಮಜಲು ಪುಣ್ವೂರು ಎಂಬಲ್ಲಿ ಮಹಿಳೆಗೆ ಕೊರೋನಾ ಪಾಸಿಟಿವ್ ಬಂದ ಕಾರಣ ಆಕೆಯ ಪ್ರಾಥಮಿಕ ಸಂಪರ್ಕದಲ್ಲಿದ್ದ ಗಂಡ ಸುರೇಂದ್ರ ಎಂಬಾತನ ಗಂಟಲು ದ್ರವ ಪರೀಕ್ಷೆ ನಡೆಸಲು ಮನೆಗೆ ಬಂದ ಸರ್ಕಾರಿ ನೌಕರರಿಗೆ ಕರ್ತವ್ಯ ನಿರ್ವಹಿಸಲು ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವಮಾನ ಮಾಡಿ, ಜೀವ ಬೆದರಿಕೆ […]

ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

ಹೆಮ್ಮಾಡಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ, ತಾಲೂಕು ಕಾನೂನು ಸೇವೆಗಳ ಸಮಿತಿ ಕುಂದಾಪುರ, ವಕೀಲರ ಸಂಘ ಕುಂದಾಪುರ, ಅಭಿಯೋಗ ಇಲಾಖೆ ಕುಂದಾಪುರ, ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಇವರ ಸಂಯುಕ್ತ ಆಶ್ರಯದಲ್ಲಿ ‘ಕಾನೂನು ಅರಿವು ಮತ್ತು ಪ್ರಚಾರ ಅಭಿಯಾನದ ಮೂಲಕ ನಾಗರಿಕರ ಸಬಲೀಕರಣ’ ಕುರಿತು ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಗಣೇಶ ಮೊಗವೀರ್ ವಹಿಸಿದ್ದರು. ಸಮಾರಂಭವನ್ನು ಗೌರವಾನ್ವಿತ ಹಿರಿಯ ಸಿವಿಲ್ […]

ಅಪಘಾತ ಪಡಿಸಿ ಮರಣಕ್ಕೆ ಕಾರಣನಾದ ಆರೋಪಿಗೆ ಶಿಕ್ಷೆ

ಉಡುಪಿ: ಅತಿವೇಗ ಹಾಗೂ ಅಜಾಗರೂಕತೆಯಿಂದ ತ್ರಿಚಕ್ರ ಗೂಡ್ಸ್ ವಾಹನವನ್ನು ಚಲಾಯಿಸಿ, ಪಾದಚಾರಿಯ ಸಾವಿಗೆ ಕಾರಣವಾದ ಆರೋಪಿಗೆ ನಗರದ 1 ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2017 ಮಾರ್ಚ್ 28 ರಂದು ರಾತ್ರಿ 7.45 ರ ಸುಮಾರಿಗೆ ಉಡುಪಿ ತಾಲೂಕು ವಾರಂಬಳ್ಳಿ ಗ್ರಾಮದ ನಿವಾಸಿಯಾದ ದಿನೇಶ್ ನಾಯಕ್ ಎಂಬಾತನು ಬಾರ್ಕೂರು – ಬ್ರಹ್ಮಾವರ ಮುಖ್ಯ ರಸ್ತೆಯ ಹಂದಾಡಿ ಗ್ರಾಮದ ಗಣೇಶ್ ಸ್ಟೋರ್ಸ್ ಎದುರು ಬಾರ್ಕೂರು ಕಡೆಯಿಂದ ಬ್ರಹ್ಮಾವರ ಕಡೆಗೆ […]