ಕೋವಿಡ್ ಎದುರಿಸಲು ಸರಕಾರ ಸನ್ನದ್ಧ, ಆತಂಕ ಬೇಡ ಎಚ್ಚರಿಕೆ ಬೇಕು: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕೋವಿಡ್ ಹೊಸ ಉಪತಳಿಯ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಎಚ್ಚರಿಕೆಯಿಂದಿದ್ದರೆ ಸಾಕು. ಆದರೆ ಹಿಂದಿನ ಸರ್ಕಾರದಲ್ಲಾದ ತಪ್ಪುಗಳು ಮರುಕಳಿಸಬಾರದು ಎಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕೋವಿಡ್ ಕುರಿತ ಉನ್ನತ ಮಟ್ಟದ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಸೇರಿ ಇನ್ನಿತರೆ ಯಾವುದಕ್ಕೂ ಕೊರತೆ ಆಗಬಾರದು. ಈಗಿನ ಉಪತಳಿ JN.1 ಅಪಾಯಕಾರಿಯಲ್ಲ. ಈ ಉಪತಳಿ ರಾಜ್ಯದಲ್ಲಿ 92 ಜನರಲ್ಲಿ ಪತ್ತೆಯಾಗಿದೆ. ಬೆಂಗಳೂರಲ್ಲಿ 80 ಪತ್ತೆಯಾಗಿದ್ದು […]
ಕೋವಿಡ್-19 ಹೊಸ ತಳಿ JN.1 ಹಾವಳಿ: ಹೊಸವರ್ಷ ಸಂಭ್ರಮಾಚರಣೆಗಳಿಗೆ ನಿಬಂಧನೆಗಳ ಸಾಧ್ಯತೆ; ತಾಂತ್ರಿಕ ಸಲಹಾ ಸಮಿತಿ ಸಭೆ ಬಳಿಕ ನಿರ್ಧಾರ
ಬೆಂಗಳೂರು: ನೆರೆಯ ಕೇರಳ ರಾಜ್ಯದಲ್ಲಿ ಕೊರೋನಾದ ಹೊಸ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರದಂದು ತಾಂತ್ರಿಕ ಸಲಹಾ ಸಮಿತಿ ಸಭೆ ಕರೆಯಲಾಗಿದೆ. ಸಭೆ ಬಳಿಕ ರಾಜ್ಯ ಸರ್ಕಾರ ಕ್ರಿಸ್ಮಸ್ ಮತ್ತು ಹೊಸ ವರ್ಷದ ಸಂಭ್ರಮಾಚರಣೆಗಳಿಗೆ ಕಟ್ಟುನಿಟ್ಟಿನ ಕ್ರಮ ಶಿಫಾರಸು ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಕೇರಳದಲ್ಲಿ ಒಮಿಕ್ರಾನ್ ಹೊಸ ಉಪತಳಿ JN.1 ಪತ್ತೆಯಾದ ಬೆನ್ನಲ್ಲೇ ರಾಜ್ಯದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ತುರ್ತು ಸಭೆ ನಡೆಸಿ, ಪ್ರಾಥಮಿಕ ಸಿದ್ಧತೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಇದರ […]