ಉಡುಪಿ ಜ್ಞಾನಸುಧಾ ಪ.ಪೂ ಕಾಲೇಜಿನಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ
ಉಡುಪಿ: ಗುರಿ, ಯೋಜನೆ, ಸತತ ಪ್ರಯತ್ನ ಇವು ಸಾಧನೆಯ ಮೂಲ ಮಂತ್ರಗಳು. ಸ್ವಪ್ರೇರಣೆಯಿಂದ ಕಾರ್ಯೋನ್ಮುಖರಾದಾಗ ಕಾರ್ಯ ಯಶಸ್ವಿಯಾಗುವುದು. ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವವನ್ನು ಬೆಳಗಿಸಿಕೊಂಡು ತಮ್ಮ ಸಂತೋಷಕ್ಕೆ ಕಾರಣವಾಗಬೇಕು. ಆರೋಗ್ಯದ ಕುರಿತು ಕಾಳಜಿ ಅಗತ್ಯ. ನಾವೆಲ್ಲ ದಯಾಜೀವಿಗಳಾಗಿ ಬದುಕನ್ನು ಸಾರ್ಥಕ ಮಾಡಿಕೊಳ್ಳೋಣ ಎಂದು ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸ್ ನ ಅಸೋಸಿಯೇಟ್ ಪ್ರೊಫೆಸರ್ ಡಾ.ಶ್ರುತಿ ಆಚಾರ್ಯ ಅಭಿಪ್ರಾಯಪಟ್ಟರು. ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿ ಅವರು ಮಾತನಾಡಿದರು. […]