ಜ್ಞಾನಸುಧಾದ 37 ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ ಮೊದಲ ಹತ್ತು ರ‍್ಯಾಂಕ್; ವಿಜ್ಞಾನ ವಿಭಾಗದ ಸಮ್ಯಕ್ ಪ್ರಭು ಹಾಗೂ ವಾಣಿಜ್ಯ ವಿಭಾಗದ ಚೈತ್ರ ಕಾಮತ್ ರಾಜ್ಯಮಟ್ಟದಲ್ಲಿ 4ನೇ ರ‍್ಯಾಂಕ್

ಉಡುಪಿ : ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದ 2023-24ನೇ ಸಾಲಿನ ದ್ವೀತೀಯ ಪಿಯುಸಿ ಪರೀಕ್ಷೆ -1ರ ಫಲಿತಾಶದಲ್ಲಿ ಜ್ಞಾನಸುಧಾದ ವಿದ್ಯಾರ್ಥಿಗಳು ರಾಜ್ಯಕ್ಕೆ 10ರೊಳಗಿನ 37 ರ‍್ಯಾಂಕ್ ಪಡೆದಿದ್ದು, ವಿಜ್ಞಾನ ವಿಭಾಗದಲ್ಲಿ ಸಮ್ಯಕ್ ಆರ್ ಪ್ರಭು (595/600) ಹಾಗೂ ವಾಣಿಜ್ಯ ವಿಭಾಗದಲ್ಲಿ ಚೈತ್ರ ಕಾಮತ್(594/600) ಅಂಕ ಗಳಿಸಿ ರಾಜ್ಯಕ್ಕೆ 4ನೇ ಸ್ಥಾನ ಗಳಿಸಿ ಉತ್ತಮ ಸಾಧನೆ ಮಾಡಿರುತ್ತಾರೆ. ವಿಜ್ಞಾನ ವಿಭಾಗ: ವಿಜ್ಞಾನ ವಿಭಾಗದಲ್ಲಿ ಪರೀಕ್ಷೆ ಬರೆದ ಒಟ್ಟು 689 ವಿದ್ಯಾರ್ಥಿಗಳಲ್ಲಿ 663 ವಿದ್ಯಾರ್ಥಿಗಳು […]

ಐಐಟಿ ಖರಗ್ ಪುರ ಕ್ಕೆ ಪ್ರವೇಶ ಪಡೆದ ಜ್ಞಾನಸುಧಾ ವಿದ್ಯಾರ್ಥಿಗಳು

ಕಾರ್ಕಳ : ಗಣಿತನಗರದಲ್ಲಿರುವ ಜ್ಞಾನಸುಧಾ ಪ.ಪೂ. ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಭಾರತೀಯ ತಂತ್ರಜ್ಞಾನ ಸಂಸ್ಥೆ(ಐ.ಐ.ಟಿ)ಗೆ ಆಯ್ಕೆಯಾಗಿದ್ದಾರೆ. ರಾಷ್ಟ್ರಮಟ್ಟದಲ್ಲಿ ಭಾರತೀಯ ತಂತ್ರಜ್ಞಾನ ಸಂಸ್ಥೆಗಳ (ಐ.ಐ.ಟಿ) ಪ್ರವೇಶಕ್ಕೆ ನಡೆದಿದ್ದ ಜೆ.ಇ.ಇ ಅಡ್ವಾನ್ಸ್ಡ್ ಫಲಿತಾಂಶದಲ್ಲಿ ವಿದ್ಯಾರ್ಥಿಗಳಾದ ಧನ್ವಿತ್ ನಾಯಕ್ ಆಲ್ ಇಂಡಿಯಾ (ಜನರಲ್ ಮೆರಿಟ್) 3918ನೇ ರ‍್ಯಾಂಕ್ ಮತ್ತು ಸಮೃದ್ಧ್ ನೆಲ್ಲಿ ಆಲ್ ಇಂಡಿಯಾ (ಜನರಲ್‌ಮೆರಿಟ್) 5769ನೇ ರ‍್ಯಾಂಕ್ ಪಡೆದು ಪ್ರತಿಷ್ಠಿತ ಐ.ಐ.ಟಿ ಖರಗ್‌ಪುರ ಇಂಜಿನಿಯರಿಂಗ್ ವಿಭಾಗಕ್ಕೆ ಪ್ರವೇಶಿಸಿದ್ದಾರೆ. ಕೆ.ಸಿ.ಇ.ಟಿ. ಇಂಜಿನಿಯರಿಂಗ್‌ನಲ್ಲಿಯೂ ಧನ್ವಿತ್ ನಾಯಕ್ 87ನೇ ರ‍್ಯಾಂಕ್, ಸಮೃದ್ಧ್ ನೆಲ್ಲಿ 349ನೇ […]

ಜ್ಞಾನಸುಧಾ ಕಾಲೇಜಿನಲ್ಲಿ ನೀಟ್ ಲಾಂಗ್ ಟರ್ಮ್ ನೋಂದಣಿ ಆರಂಭ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ

ಮಣಿಪಾಲ: 2024ರ ನೀಟ್ ಪರೀಕ್ಷೆಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳಿಗಾಗಿ ಜ್ಞಾನಸುಧಾ ಮಣಿಪಾಲದಲ್ಲಿ ಅನುಭವಿ ಉಪನ್ಯಾಸಕರಿಂದ ತರಬೇತಿ ನೀಡಲಾಗುವುದು. ಕಳೆದ ಎರಡು ವರ್ಷಗಳಲ್ಲಿ 186 ವಿದ್ಯಾರ್ಥಿಗಳು ನೀಟ್ ಪರೀಕ್ಷೆಯ ಮೂಲಕ ಎಂ.ಬಿ.ಬಿ.ಎಸ್ ಗೆ ಸೇರಿರುವುದು ಗಮನಾರ್ಹವಾಗಿದೆ. ಪ್ರಸಕ್ತ ಸಾಲಿನ ತರಬೇತಿಗೆ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದ್ದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗುವುದು. ಆಸಕ್ತ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳಲು ಕೆಳಕಂಡ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಲು ಕೋರಲಾಗಿದೆ. 8762280555/ 8762095555

ಜೆಇಇ ಮೈನ್ 2ನೇ ಹಂತದ ಅಂತಿಮ ಫಲಿತಾಂಶ: ಜ್ಞಾನಸುಧಾ ವಿದ್ಯಾರ್ಥಿಗಳ ಸಾಧನೆ

ಕಾರ್ಕಳ : ರಾಷ್ಟ್ರಮಟ್ಟದಲ್ಲಿ ನಡೆಯುವ ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಯಾದ ಜೆಇಇ ಮೈನ್ 2ನೇ ಫೇಸ್‌ನ ಅಂತಿಮ ಫಲಿತಾಂಶದಲ್ಲಿ ಕಾರ್ಕಳ ಜ್ಞಾನಸುಧಾ ಪಿಯು ಕಾಲೇಜಿನ ಪ್ರಣವ್ ಗುಜ್ಜರ್ ಭೌತಶಾಸ್ತ್ರದಲ್ಲಿ 100 ಪರ್ಸಂಟೈಲ್ ಪಡೆಯುವುದರ ಜೊತೆಗೆ, ಗಣಿತಶಾಸ್ತ್ರದಲ್ಲಿ 99.5756 ಪರ್ಸಂಟೈಲ್ ಮತ್ತು ರಸಾಯನಶಾಸ್ತ್ರದಲ್ಲಿ 99.3912 ಪರ್ಸಂಟೈಲ್‌ನೊಂದಿಗೆ ಒಟ್ಟು 99.8421730 ಪರ್ಸಂಟೈಲ್ ಗಳಿಸಿಕೊಂಡು ಉತ್ತಮ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳಾದ ಪ್ರಣವ್ ಗುಜ್ಜರ್ 99.84217 ಪರ್ಸಂಟೈಲ್, ಶ್ರೇಯಸ್ ಆರ್ ಗೌಡ 98.89945 ಪರ್ಸಂಟೈಲ್, ಧನ್ವಿತ್ ನಾಯಕ್ 98.8703 ಪರ್ಸಂಟೈಲ್, ಸಮೃದ್ಧ್ ನೆಲ್ಲಿ 98.84006 […]

ಕಾರ್ಕಳ ಜ್ಞಾನಸುಧಾ ಕಾಲೇಜಿನ ವಾರ್ಷಿಕ ಸಾಂಸ್ಕೃತಿಕ ಕಾರ್ಯಕ್ರಮ ‘ಜ್ಞಾನಸಂಭ್ರಮ’ಕ್ಕೆ ಚಾಲನೆ

ಗಣಿತ ನಗರ: ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಗಣಿತನಗರ ಕ್ರೀಡಾಂಗಣದಲ್ಲಿ ನಡೆದ 2022-23ನೇ ಸಾಲಿನ ವಾರ್ಷಿಕ ಸಾಂಸ್ಕೃತಿಕ ಉತ್ಸವ ‘ಜ್ಞಾನ ಸಂಭ್ರಮ -2022’ಅನ್ನು ಹಿರಿಯರಾದ ದೇಜು ಮೈಂದನ್ ಕೊಡವೂರ್ ದೀಪ ಬೆಳಗಿಸಿ ಉದ್ಘಾಟಿಸಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ, ಶಿಕ್ಷಣದ ಜೊತೆಗೆ ವಿದ್ಯಾರ್ಥಿಯಲ್ಲಿ ನಾಡು, ನುಡಿ, ಸಂಸ್ಕೃತಿ, ಆಚಾರ- ವಿಚಾರಗಳನ್ನು ಪರಿಚಯಿಸುವಲ್ಲಿ ಸಾಂಸ್ಕೃತಿಕ ಚಟುವಟಿಕೆಗಳು ಬಹು ಮುಖ್ಯ ಪಾತ್ರ ವಹಿಸುತ್ತವೆ. ಆಟ-ಪಾಠದ ಜೊತೆಗೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ […]