ರಾಜ್ಯಮಟ್ಟದ ಜಂಪ್ ರೋಪ್ ಸ್ಪರ್ಧೆ: ಜ್ಞಾನಸುಧಾ ವಿದ್ಯಾರ್ಥಿನಿ ಚಿನ್ಮಯಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಾರ್ಕಳ : ಕೊಪ್ಪಳದ ಶ್ರೀ ಕರಿಸಿದ್ದೇಶ್ವರ ಸಮುದಾಯ ಭವನದಲ್ಲಿ ಪದವಿ ಪೂರ್ವಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಜರುಗಿದ ರಾಜ್ಯಮಟ್ಟದ ಜಂಪ್‌ರೋಪ್‌ ಕ್ರೀಡಾಸ್ಪರ್ಧೆಯಲ್ಲಿ 30 ಸೆಕೆಂಡ್ ಸ್ಪೀಡ್‌ ಡಬಲ್ ಅಂಡರ್ ವಿಭಾಗದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕು.ಚಿನ್ಮಯಿ.ಎಸ್.ದೇಶ್‌ಪಾಂಡೆ ಚಿನ್ನದ ಪದಕ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಈಕೆ ಶ್ರೀನಿವಾಸ್‌ ದೇಶ್‌ಪಾಂಡೆ ಹಾಗೂ ಮನಸ್ವಿನಿ.ಎಸ್.ದೇಶಪಾಂಡೆ ದಂಪತಿಗಳ ಸುಪುತ್ರಿ. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿ ಸೌಜನ್ಯ ಹೆಗ್ಡೆಯವರು ಮಾರ್ಗದರ್ಶನ ಮಾಡಿದ್ದಾರೆ. ಸಾಧಕ ವಿದ್ಯಾರ್ಥಿನಿಯನ್ನುಅಜೆಕಾರ್ ಪದ್ಮಗೋಪಾಲ್‌ಎಜ್ಯುಕೇಶನ್‌ ಟ್ರಸ್ಟ್ನ […]

ವಿದ್ಯೆಯನ್ನು ಇತರರ ಏಳಿಗೆಗೋಸ್ಕರ ಬಳಸಿ: ಮೌಲ್ಯ ಸುಧಾ ಕಾರ್ಯಕ್ರಮದಲ್ಲಿ ಸ್ವಾಮಿ ಶ್ರೀ ವೀರೇಶಾನಂದ ಸರಸ್ವತೀ ಅಭಿಮತ

ಕಾರ್ಕಳ: ಮನುಷ್ಯನಿಗೆ ಯೌವ್ವನ, ಅಧಿಕಾರ, ಸಂಪತ್ತು, ಅವಿವೇಕ ಎಂಬ ನಾಲ್ಕು ಅಂಶಗಳಲ್ಲಿ ಒಂದು ಅಂಶ ಹೊಕ್ಕಿದರೂ ಆತ ಪತನಗೊಳ್ಳುತಾನೆ. ಅವಿವೇಕವನ್ನು ಹೊಂದಿದವನ ಬದುಕು ನಿರ್ನಾಮವಾಗುತ್ತದೆ. ವಿವೇಕಿಯಾದ ವ್ಯಕ್ತಿ ತನ್ನ ವಿದ್ಯೆಯನ್ನು ಜ್ಞಾನದಾನಕ್ಕಾಗಿ, ಇತರರ ಏಳಿಗೆಗೋಸ್ಕರ ಬಳಸುತ್ತಾನೆ ಎಂದು ತುಮಕೂರಿನ ರಾಮಕೃಷ್ಣ – ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಸ್ವಾಮಿ ಶ್ರೀ ವೀರೇಶಾನಂದ ಸರಸ್ವತೀ ಮಹಾರಾಜ್ ಅಭಿಪ್ರಾಯಪಟ್ಟರು. ಅವರು ಶ್ರೀ ಮಹಾಗಣಪತಿ ದೇವಾಸ್ಥಾನ ಗಣಿತನಗರ ಮತ್ತು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದೊಂದಿಗೆ ಆಯೋಜಿಸಲಾಗುತ್ತಿರುವ ತಿಂಗಳ ಸರಣಿಯ ಕಾರ್ಯಕ್ರಮ ಮಾಲಿಕೆ […]

ಕಾರ್ಕಳ: ಜಂಪ್ ರೋಪ್ ಪಂದ್ಯಾಟದಲ್ಲಿ ಚಿನ್ನ ಗೆದ್ದು ರಾಜ್ಯಮಟ್ಟಕ್ಕೆ ಆಯ್ಕೆಯಾದ ಜ್ಞಾನಸುಧಾ ವಿದ್ಯಾರ್ಥಿಗಳು

ಕಾರ್ಕಳ: ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ನ್ಯಾಶನಲ್ ಪಿ.ಯು ಕಾಲೇಜು ಬಾರ್ಕೂರು ಇದರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಜಂಪ್ ರೋಪ್ ಟೂರ್ನಾಮೆಂಟ್ ನಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಐವರು ವಿದ್ಯಾರ್ಥಿಗಳು ಚಿನ್ನದ ಪದಕ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 30 ಸೆಕೆಂಡ್ ಸ್ಪೀಡ್ ಡಬಲ್ ಅಂಡರ್ ಜಂಪ್ ರೋಪ್‌ನಲ್ಲಿ ವಿಶ್ವನಾಥ ಕೊಪ್ಪದ್ ಹಾಗೂ ಕು.ಚಿನ್ಮಯ್.ಎಸ್.ದೇಶಪಾಂಡೆ ಚಿನ್ನದ ಪದಕ, 3.ಮೀ.ಎಂಡೊರೆನ್ಸ್ ಜಂಪ್ ರೋಪ್‌ನಲ್ಲಿ ವಿಘ್ನೇಶ್ ಭಟ್ ಹಾಗೂ ಮಾನ್ಯ ಎಂ.ಎ ಚಿನ್ನದ ಪದಕ, […]

ಕಾರ್ಕಳ: ಜ್ಞಾನಸುಧಾ ಕಾಲೇಜಿನಲ್ಲಿ ಎನ್.ಎಸ್.ಎಸ್. ವಾರ್ಷಿಕ ಶಿಬಿರ ಉದ್ಘಾಟನೆ

ಗಣಿತನಗರ :ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಿಗೆ ಸಮಯಪ್ರಜ್ಞೆ, ಶಿಸ್ತು, ನಾಯಕತ್ವವನ್ನು ಕಲಿಸುವುದರ ಜೊತೆಗೆ ಸಹನೆಯನ್ನು ಪ್ರತಿಬಿಂಬಿಸುತ್ತದೆ ಎಂದು ಅನಿಲ್ ಕುಮಾರ್‌ಜೈನ್‌ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಕುಕ್ಕುಂದೂರಿನ ಶ್ರೀ ದುರ್ಗಾದೇವಿ ಅನುದಾನಿತ ಹಿ.ಪ್ರಾ. ಶಾಲೆಯಲ್ಲಿ ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ರಾ.ಸೇ.ಯೋ. ಘಟಕದಿಂದ ನಡೆಯುತ್ತಿರುವ ವಾರ್ಷಿಕ ವಿಶೇಷ ಶಿಬಿರ -2022ರ ದಿಕ್ಸೂಚಿ ಭಾಷಣವನ್ನುದ್ದೇಶಿಸಿ ಮಾತನಾಡಿ, ಎನ್.ಎಸ್.ಎಸ್ ಜೊತೆಗಿನ ತಮ್ಮ ಸ್ವಂತ ಅನುಭವಗಳನ್ನು ಹಂಚಿಕೊಂಡು, ಎನ್.ಎಸ್.ಎಸ್ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯ ಹಿಂದಿನ ಶಕ್ತಿಯಾಗಿ ಪಾತ್ರವಹಿಸುತ್ತದೆ ಎಂದರು. ಶಿಬಿರವನ್ನು […]

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಜ್ಞಾನಸುಧಾ ವಿದ್ಯಾರ್ಥಿಗಳಿಗೆ ರಜತ ಪದಕ

ಕಾರ್ಕಳ: ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಶಿವಮೊಗ್ಗದಲ್ಲಿ ನಡೆದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಸುಹಾಸ್‌. ಎಸ್.‌ ಜೋಳದ್‌ ಮತ್ತು ಪ್ರಥಮ ವಿಜ್ಞಾನ ವಿಭಾಗದ ಸ್ತುತಿ.ಎಚ್‌.ಬಿ. ಭಾಗವಹಿಸಿ ದ್ವಿತೀಯ ಸ್ಥಾನಗಳಿಸಿ ರಜಕ ಪದಕವನ್ನು ಪಡೆದು ತೀರ್ಪುಗಾರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್‌ ಪದ್ಮಗೋಪಾಲ್‌ ಎಜ್ಯುಕೇಶನ್‌ ಟ್ರಸ್ಟ್‌ನ ಅಧ್ಯಕ್ಷ ಡಾ.ಸುಧಾಕರ್‌ ಶೆಟ್ಟಿಯವರು ಅಭಿನಂದಿಸಿದ್ದು, ಆಡಳಿತ ಮಂಡಳಿ ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿ ಶುಭ […]