ಕಾರ್ಕಳ ಜ್ಞಾನಸುಧಾ ಕಾಲೇಜಿನಲ್ಲಿ ನಿವೃತ್ತ ಹಿರಿಯ ಶಿಕ್ಷಕರಿಗೆ ಗೌರವಾರ್ಪಣೆ

ಉಡುಪಿ: ಇಂದಿನ ಶಿಕ್ಷಣದಲ್ಲಿ ಸಾಮಾಜಿಕ ಜಾಲತಾಣಗಳ ಭರಾಟೆಯಿಂದ ರಸಕ್ಕಿಂತ ಕಸವೇ ಹೆಚ್ಚು ತುಂಬಿದೆ. ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಜೊತೆಗೆ ಪೋಷಕರು ಸಹ ಕೈ ಜೋಡಿಸಿದಲ್ಲಿ ಆದರ್ಶ ಸಮಾಜ ನಿರ್ಮಾಣವಾವಾಗಲು ಸಾಧ್ಯ ಎಂದು ಉಡುಪಿಯ ಡಾ.ಟಿ.ಎಂ.ಎ.ಪೈ.ಕಾಲೇಜ್‌ ಆಫ್‌ ಎಜ್ಯುಕೇಷನ್‌ ಸಂಸ್ಥೆಯ ಸಂಯೋಜನಾಧಿಕಾರಿ, ಶಿಕ್ಷಣ ತಜ್ಞ ಡಾ.ಮಹಾಬಲೇಶ್ವರ ರಾವ್‌ ಹೇಳಿದರು. ಅವರು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಜರುಗಿದ ಶಿಕ್ಷಕರ ದಿನಾಚರಣೆಯಲ್ಲಿ ನಿವೃತ್ತ ಹಿರಿಯ ಶಿಕ್ಷಕರನ್ನು ಗೌರವಿಸಿ ಮಾತನಾಡಿದರು. ಪ್ರಾಥಮಿಕ ಶಾಲಾ ಶಿಕ್ಷಕರು ಮಕ್ಕಳ ಎರಡನೆ ಪಾಲಕರು. ಅಂತಹ […]

ಜ್ಞಾನಸುಧಾ ಸಂಸ್ಥಾಪಕರ ದಿನದ ಅಂಗವಾಗಿ ಆಗಸ್ಟ್ 21 ರಂದು ರಕ್ತದಾನ ಶಿಬಿರ

ಕಾರ್ಕಳ: ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್, ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳು ಗಣಿತನಗರ ಕಾರ್ಕಳ, ನಾಗಬನ ಕ್ಯಾಂಪಸ್ ಉಡುಪಿ, ಜ್ಞಾನಸುಧಾ ಎನ್.ಸಿ.ಸಿ, ಎನ್.ಎಸ್.ಎಸ್ ಮತ್ತು ಹಳೆ ವಿದ್ಯಾರ್ಥಿ ಸಂಘ, ರೆಡ್ ಕ್ರಾಸ್ ಸೊಸೈಟಿ ಕಾರ್ಕಳ-ಕುಂದಾಪುರದ ಸಹಯೋಗದೊಂದಿಗೆ ಜ್ಞಾನಸುಧಾ ಸಂಸ್ಥಾಪಕರ ದಿನದ ಅಂಗವಾಗಿ ಆಗಸ್ಟ್ 21 ರಂದು ಗಣಿತ ನಗರ ಕ್ಯಾಂಪಸ್ ನಲ್ಲಿ ಬೆಳಿಗ್ಗೆ 9.30 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ.

ಸಿ.ಎ ಫೌಂಡೇಶನ್ ಫಲಿತಾಂಶ: ಕಾರ್ಕಳ ಜ್ಞಾನಸುಧಾ ಕಾಲೇಜಿನ ವಿದ್ಯಾರ್ಥಿಗಳಿಂದ ಅಮೋಘ ಸಾಧನೆ

ಕಾರ್ಕಳ: ಇನ್ಸ್ಟಿಟ್ಯೂಟ್ ಆಫ್‌ ಚಾರ್ಟಡ್‌ ಎಕೌಂಟೆಂಟ್ಸ್ ಆಫ್‌ ಇಂಡಿಯಾವು ರಾಷ್ಟ್ರಮಟ್ಟದಲ್ಲಿ ನಡೆಸುವ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಕಾರ್ಕಳ ಜ್ಞಾನಸುಧಾ ಕಾಲೇಜಿನ ವಾಣಿಜ್ಯ ವಿಭಾಗದ 6 ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದುವ ಮೂಲಕ ಮುಂದಿನ ಸಿಎ ಇಂಟರ್ ಮೀಡಿಯೆಟ್ ಹಂತಕ್ಕೆ ಅಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಾದ ಸಾತ್ವಿಕ್ ಪ್ರಭು (342/400), ರಶ್ಮಿತಾ (234/400), ಶೆಟ್ಟಿ ಪ್ರೀತೇಶ್ (227/400), ರಾಹುಲ್ (216/400), ಛಾಯ.ಸಿ.ಪೈ (215/400), ಶ್ರೀನಿಧಿ ಭಟ್(200/400) ಅಂಕ ಗಳಿಸಿರುತ್ತಾರೆ. ಸಂಸ್ಥೆಯಿಂದ ಒಟ್ಟು 15 ವಿದ್ಯಾರ್ಥಿಗಳು ಪರೀಕ್ಷೆ ಬರೆದಿರುತ್ತಾರೆ. ಸಾಧಕ ವಿದ್ಯಾರ್ಥಿಗಳನ್ನು […]

ಕೆಸಿಇಟಿ ಇಂಜಿನಿಯರಿಂಗ್ ನಲ್ಲಿ ಜ್ಞಾನಸುಧಾದ ಸ್ತುತಿಗೆ 40ನೇ ರ‍್ಯಾಂಕ್; ಜಿಲ್ಲೆಗೆ ಪ್ರಥಮ ಸ್ಥಾನ

ಕಾರ್ಕಳ : ಕೆಸಿಇಟಿ ಇಂಜಿನಿಯರಿಂಗ್ 2022ರ ಫಲಿತಾಂಶದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಕು. ಸ್ತುತಿ ಎಸ್, ಕೆಸಿಇಟಿ ಇಂಜಿನಿಯರಿಂಗ್ ವಿಭಾಗದಲ್ಲಿ ರಾಜ್ಯಕ್ಕೆ 40ನೇ ರ‍್ಯಾಂಕ್ ಗಳಿಸಿ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿರುತ್ತಾರೆ. ಈ ವರ್ಷ ರಾಜ್ಯದಲ್ಲಿ ಒಟ್ಟು 2,10,829 ವಿದ್ಯಾರ್ಥಿಗಳು ಕೆಸಿಇಟಿ ಪರೀಕ್ಷೆ ಬರೆದಿದ್ದು, ಇದರಲ್ಲಿಇವಳ ಸಾಧನೆಯು ಶ್ಲಾಘನೀಯ ಸಂಗತಿಯಾಗಿದೆ. ಈಕೆಯು ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಐದು ವಿಷಯಗಳಲ್ಲಿ ನೂರಕ್ಕೆ ನೂರು ಅಂಕಗಳಿಸಿ, 593 ಅಂಕಗಳೊಂದಿಗೆ ರಾಜ್ಯಕ್ಕೆ 6 ನೇ ರ‍್ಯಾಂಕ್, ಕಾಮೆಡ್-ಕೆ […]

ಜ್ಞಾನಸುಧಾ ಕಾಲೇಜಿನಲ್ಲಿ  ಜನ್ಮಶತಾಬ್ದಿ ನುಡಿನಮನ ಕಾರ್ಯಕ್ರಮ

ಕಾರ್ಕಳ: ಶಿಕ್ಷಣ ನಮಗೆ ಜ್ಞಾನ, ಧೈರ್ಯ, ಮಾರ್ಗದರ್ಶನ, ನೌಕರಿಯನ್ನು ನೀಡುತ್ತದೆ. ಆದರೆ ಇಂದು ವಿದ್ಯಾರ್ಥಿಗಳು ತಮ್ಮ ಪೋಷಕ, ಶಿಕ್ಷಕರನ್ನು ಗೌರವಿಸದಿರುವುದು ವಿಷಾದನೀಯ ಸಂಗತಿ ಎಂದು ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿ  ಬಿ.ಸದಾಶಿವ ಪ್ರಭು ನುಡಿದರು. ಅವರು ಗಣಿತನಗರದ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯಲ್ಲಿ ನಡೆದ, ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನ ಸಂಸ್ಥಾಪಕ ಗೋಪಶೆಟ್ಟಿಯವರ ಜನ್ಮಶತಾಬ್ದಿ ನುಡಿನಮನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜೀವನ ಮೌಲ್ಯಗಳನ್ನು ಸಮಗ್ರವಾಗಿ ಅಳವಡಿಸಿಕೊಂಡು ಜೀವನದ ಸಮಗ್ರ ಅಭಿವೃದ್ದಿಯ ಕನಸು ಕಾಣಲು, ಜ್ಞಾನಸುಧಾ […]