ಜ್ಞಾನಸುಧಾ ವಿದ್ಯಾರ್ಥಿನಿ ಅರುಂಧತಿ.ಜಿ.ವಿ ರಾಜ್ಯ ಮಟ್ಟದ ಚೆಸ್ ಪಂದ್ಯಾಟಕ್ಕೆ ಆಯ್ಕೆ
ಕಾರ್ಕಳ : ಜ್ಞಾನಸುಧಾ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿನಿ ಕು.ಅರುಂಧತಿ.ಜಿ.ವಿ ಇವರು ಶ್ರೀಮೂಕಾಂಬಿಕ ದೇವಳ ಸ್ವತಂತ್ರ ಪ.ಪೂ.ಕಾಲೇಜು ಕೊಲ್ಲೂರು ಇಲ್ಲಿ ನಡೆದ ಪದವಿ ಪೂರ್ವ ವಿಭಾಗದ ಉಡುಪಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ 5ನೇ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಗಣೇಶ್ ವಿ.ಜಿ ಮತ್ತು ಶ್ರೀಮತಿ ವೀಣಾ ದಂಪತಿಗಳ ಪುತ್ರಿ. ರಾಜ್ಯಮಟ್ಟದ ಚೆಸ್ ಸ್ಪರ್ಧೆಯಲ್ಲಿ ಪಾಲ್ಗೊಳ್ಳುತ್ತಿರುವ ಸಾಧಕ ವಿದ್ಯಾರ್ಥಿಗೆ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ ಅಭಿನಂದಿಸಿದ್ದು, ಬೋಧಕ-ಬೋಧಕೇತರ ಸಿಬ್ಬಂದಿ ವರ್ಗ ಶುಭಹಾರೈಸಿದ್ದಾರೆ.