ಆ.5 ರಂದು ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಬೃಹತ್ ಉದ್ಯೋಗ ಮೇಳ
ಉಡುಪಿ: ಬ್ರಹ್ಮಾವರದ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಆ. 5 ರಂದು ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕ ಸುಬ್ರಹ್ಮಣ್ಯ ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಉದ್ಯೋಗ ಮೇಳದಲ್ಲಿ 20 ಅಧಿಕ ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದ್ದು, ಗ್ರಾಮೀಣ ಭಾಗದ ಯುವಕ-ಯುವತಿಯರಿಗೆ ಉದ್ಯೋಗ ಪಡೆಯಲು ಉತ್ತಮ ಅವಕಾಶವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಥಳದಲ್ಲೇ ನೇಮಕಾತಿ ಪತ್ರ ನೀಡಲಾಗುವುದು. ಉದ್ಯೋಗಮೇಳದಲ್ಲಿ ಭಾಗವಹಿಸಲು ನೋಂದಣಿ ಉಚಿತವಾಗಿದ್ದು, ಕಡ್ಡಾಯವಾಗಿ ನೋಂದಣಿ ಆಗತಕ್ಕದ್ದು ಎಂದು ಅವರು ಮಾಹಿತಿ ನೀಡಿದರು. […]
ಬ್ರಹ್ಮಾವರ: ವಿದ್ಯಾಲಕ್ಷ್ಮಿ ಸಮೂಹ ಸಂಸ್ಥೆಯಲ್ಲಿ ಬೃಹತ್ ಉದ್ಯೋಗ ಮೇಳ
ಬ್ರಹ್ಮಾವರ: ಇಲ್ಲಿನ ವಿದ್ಯಾಲಕ್ಷ್ಮಿ ಸಮೂಹ ಸಂಸ್ಥೆಯಲ್ಲಿ ಆಗಸ್ಟ್ 5 ರಂದು ಬೆಳಿಗ್ಗೆ 9 ಗಂಟೆಯಿಂದ ಬೃಹತ್ ಉದ್ಯೋಗ ಮೇಳ ನಡೆಯಲಿದೆ. ಮೇಳದಲ್ಲಿ ಭಾಗವಹಿಸಲು ಆನ್ ಲೈನ್ ನೋಂದಣಿ ಕಡ್ಡಾಯವಾಗಿದೆ. 15 ಕ್ಕಿಂತ ಹೆಚ್ಚಿನ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ ಎಂದು ಸಂಸ್ಥೆಯ ಅಧ್ಯಕ್ಷ ಸುಬ್ರಮಣ್ಯ ತಿಳಿಸಿದ್ದಾರೆ.
ಜುಲೈ 14 ರಂದು ರಜತಾದ್ರಿಯಲ್ಲಿ ಮಿನಿ ಉದ್ಯೋಗ ಮೇಳ
ಉಡುಪಿ: ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಜುಲೈ 14 ರಂದು ಬೆಳಗ್ಗೆ 10.30 ಕ್ಕೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್ ಮತ್ತು ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, […]
ಉದ್ಯೋಗದಿಂದ ಸಿಗುವ ಜೀವನ ಭದ್ರತೆಯು ಸಮಾಜಕ್ಕೆ ಬೆಳಕು ನೀಡುತ್ತದೆ: ಪ್ರಕಾಶ್ ಅಮ್ಮಣ್ಣಾಯ
ಉಡುಪಿ: ಕೊಡವೂರು ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ ಆಶ್ರಯದಲ್ಲಿ, ಕೊಡವೂರು ವಾರ್ಡ್ ಅಭಿವೃದ್ದಿ ಸಮಿತಿ ಮತ್ತು ರಾಷ್ಟ್ರೀಯ ಪದವಿ ಪೂರ್ವ ವಿದ್ಯಾರ್ಥಿಗಳ, ಪೋಷಕರ ಮತ್ತು ಶಿಕ್ಷಕರ ಸಂಘ ಇವರ ಸಹಯೋಗದಲ್ಲಿ ಉಡುಪಿಯ ನಿತ್ಯಾನಂದ ಮಠ ಮಂದಿರದಲ್ಲಿ 7ನೇಯ ಮಿನಿ ಉದ್ಯೋಗ ಮೇಳ ನಡೆಯಿತು. ಖ್ಯಾತ ಜ್ಯೋತಿಷಿ ಪ್ರಕಾಶ್ ಅಮ್ಮಣ್ಣಾಯ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿ, ಉದ್ಯೋಗ ಯುವಕರಿಗೆ ಭದ್ರತೆಯನ್ನು ನೀಡುತ್ತದೆ ಮತ್ತು ಈ ಭದ್ರತೆಯಿಂದ ಸಮಾಜಕ್ಕೆ ಬೆಳಕಾಗುತ್ತದೆ. ನ್ಯಾಯ ನೀತಿ ಧರ್ಮದಲ್ಲಿ ನಡೆದಾಗ ನಮಗೆ ಜೀವನದಲ್ಲಿ […]
ಏ. 11 ರಂದು ಜಿಲ್ಲಾಧಿಕಾರಿ ಸಂಕೀರ್ಣದಲ್ಲಿ ಮಿನಿ ಉದ್ಯೋಗ ಮೇಳ
ಉಡುಪಿ: ಯುಕ್ತ ಕೌಶಲ್ಯ ತರಬೇತಿ ಕೇಂದ್ರ, ಪ್ರಕಾಶ್ ರಿಟೇಲ್, ಎಸ್.ಬಿ.ಐ ಲೈಫ್ ಇನ್ಶೂರೆನ್ಸ್, ಏಂಜೆಲ್ ಬ್ರೋಕಿಂಗ್ ಪ್ರೈಲಿ. ಮತ್ತು ಮೆಡ್ ಪ್ಲಸ್ ಕಂಪನಿಗಳ ವತಿಯಿಂದ ಏಪ್ರಿಲ್ 11 ರಂದು ಬೆಳಗ್ಗೆ 10.30 ಕ್ಕೆ ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್ ಮತ್ತು ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್‌ಕಾರ್ಡ್ […]