ಸಮುದಾಯ ಸಂಪನ್ಮೂಲ ವ್ಯಕ್ತಿ ಹುದ್ದೆಗಳಿಗೆ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಉಡುಪಿ: ಉಡುಪಿ ನಗರಸಭೆಯ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ದೀನ ದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (ಡೇ-ನಲ್ಮ್) ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು, ನಗರಸಭೆಯಿಂದ ರಚಿಸಲ್ಪಟ್ಟ ಅರ್ಹ ಸ್ವ-ಸಹಾಯ ಗುಂಪುಗಳ ಹಾಗೂ ಪ್ರದೇಶ ಮಟ್ಟದ ಒಕ್ಕೂಟದ 18 ರಿಂದ 45 ವರ್ಷದೊಳಗಿನ ಅರ್ಹ ಮಹಿಳಾ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ. ದ್ವಿತೀಯ ಪಿ.ಯು.ಸಿ ಉತ್ತೀರ್ಣರಾಗಿರುವ, ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರುವ ಅರ್ಹ ಮಹಿಳಾ ಅಭ್ಯರ್ಥಿಗಳು ಅರ್ಜಿ […]

ನಮ್ಮ ಕ್ಲಿನಿಕ್ ವೈದ್ಯಾಧಿಕಾರಿ ಹುದ್ದೆಗೆ ನೇರ ಸಂದರ್ಶನ

ಉಡುಪಿ: ಉಡುಪಿ ತಾಲೂಕು ವ್ಯಾಪ್ತಿಯ ನಮ್ಮ ಕ್ಲಿನಿಕ್‌ನಲ್ಲಿ ಖಾಲಿ ಇರುವ ವೈದ್ಯಾಧಿಕಾರಿ-01 ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುವ ಸಲುವಾಗಿ ಅಕ್ಟೋಬರ್ 15 ರಂದು ಮಧ್ಯಾಹ್ನ 3 ಗಂಟೆಗೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ. ಎಂ.ಬಿ.ಬಿ.ಎಸ್ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳು ಮೂಲದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೊಚ್ಚಿನ್ ಶಿಪ್‌ ಯಾರ್ಡ್ ನಲ್ಲಿ ಡೆಪ್ಯುಟಿ ಮ್ಯಾನೇಜರ್ ಪೇಂಟಿಂಗ್ ಹುದ್ದೆ ಖಾಲಿ

ಉಡುಪಿ: ಉಡುಪಿಯ ಕೊಚ್ಚಿನ್ ಶಿಪ್‌ಯಾರ್ಡ್ ಲಿ. ನಲ್ಲಿ ಖಾಲಿ ಇರುವ ಡೆಪ್ಯುಟಿ ಮ್ಯಾನೇಜರ್ ಪೇಂಟಿಂಗ್ -1 ಹುದ್ದೆಗೆ 38 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.cochinshipyard.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಅಪ್ರೆಂಟಿಶಿಪ್

ಉಡುಪಿ: ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್ ತರಬೇತಿ ಸಂಸ್ಥೆಯ ವತಿಯಿಂದ ಫಿಟ್ಟರ್, ಟರ್ನರ್, ಮೆಷಿನಿಸ್ಟ್, ಎಲೆಕ್ಟ್ರಿಷಿಯನ್, ವೆಲ್ಡರ್, ಸಿ.ಓ.ಪಿ.ಎ, ಫೌಂಡ್ರಿಮ್ಯಾನ್ ಮತ್ತು ಶೀಟ್ ಮೆಟಲ್ ವರ್ಕರ್ ಟ್ರೇಡ್‌ನಲ್ಲಿ ಅಪ್ರೆಂಟಿಶಿಪ್ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯದ ಮಾನ್ಯತೆ ಪಡೆದ ಐ.ಟಿ.ಐ ಗಳಿಂದ ಕುಶಲಕರ್ಮಿಗಳ ತರಬೇತಿ ಯೋಜನೆಯಲ್ಲಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅಕ್ಟೋಬರ್ 8 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಉಡುಪಿ ಮೊ.ನಂ: 9945856670, 8197440155 […]

ಮಂಗಳೂರು: ಅಮೆಜಾನ್ ಕಂಪನಿಯಿಂದ ಜು.12 ರಂದು ನೇರ ಸಂದರ್ಶನ

ಮಂಗಳೂರು: ಅಮೆಜಾನ್ ಕಂಪನಿಯಲ್ಲಿ ತಿಂಗಳಿಗೆ 26 ಸಾವಿರ ರೂ. ವೇತನವುಳ್ಳ, 100 ಡೆಲಿವರಿ ಬಾಯ್ ಹುದ್ದೆಗಳಿಗೆ ಜು.12 ರಂದು ಮಂಗಳವಾರ, ಮಂಗಳೂರಿನ ಉರ್ವಾ ಮಾರುಕಟ್ಟೆಯ 2 ನೇ ಮಹಡಿಯಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ದಿ ಕಚೇರಿಯಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ. ಯಾವುದೇ ವಿದ್ಯಾರ್ಹತೆಯುಳ್ಳ ಆಸಕ್ತ ಉದ್ಯೋಗಾಕಾಂಕ್ಷಿಗಳು ದ್ವಿಚಕ್ರ ವಾಹನ ಪರವಾನಿಗೆ, ಪಾನ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ಆಂಡ್ರಾಯಿಡ್ ಸ್ಮಾರ್ಟ್‍ಫೋ ನ್ ಹಾಗೂ ಇತರೆ ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಿ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಹಾಗೂ ಮಾಹಿತಿಗಾಗಿ ಕಚೇರಿ ದೂ.ಸಂಖ್ಯೆ:0824-2453222 […]