ಮಂಗಳೂರು: ಲುಲು ಗ್ರೂಪ್ ನಲ್ಲಿ ಉದ್ಯೋಗ ನೇಮಕಾತಿಗಾಗಿ ಫರ್ನಾಂಡಿಸ್ ಗ್ರೂಪ್ ವತಿಯಿಂದ ನೇರ ಸಂದರ್ಶನ

ಮಂಗಳೂರು: ಏಷ್ಯಾದ ಅತಿ ದೊಡ್ಡ ಹೈಪರ್‌ ಮಾರ್ಕೆಟ್ ಗ್ರೂಪ್ ಆದಂತಹ ಲುಲು ಗ್ರೂಪ್ ನಲ್ಲಿ ಯುವಕರಿಗಾಗಿ ಉದ್ಯೋಗಾವಕಾಶಗಳಿದ್ದು, ಅಭ್ಯರ್ಥಿಗಳ ಆಯ್ಕೆಗಾಗಿ ಮಂಗಳೂರಿನ ಫರ್ನಾಂಡಿಸ್ ಅಸೋಸಿಯೇಟ್ಸ್ ಕಚೇರಿಯಲ್ಲಿ ಜೂನ್ 22 ಮತ್ತು 23 ರಂದು ಬೆಳಿಗ್ಗೆ 9 ರಿಂದ ಸಂಜೆ 6 ರ ನಡುವೆ ನೇರ ಸಂದರ್ಶನಗಳನ್ನು ಏರ್ಪಡಿಸಲಾಗಿದೆ ಎಂದು ಫರ್ನಾಂಡಿಸ್ ಗ್ರೂಪ್ ನ ಅಧ್ಯಕ್ಷ ವಿಲ್ಸನ್ ಫೆರ್ನಾಂಡಿಸ್ ಹೇಳಿದರು. ಅವರು ಮಂಗಳವಾರದಂದು ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಯುಎಇ, ಕತಾರ್, ಬಹ್ರೇನ್‌, ಮಸ್ಕತ್, ಸೌದಿ ಅರೇಬಿಯಾ, ಮಲೇಷ್ಯಾ […]

ಜೂನ್ 15 ರಂದು ರಜತಾದ್ರಿಯಲ್ಲಿ ಮಿನಿ ಉದ್ಯೋಗ ಮೇಳ

ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಜೂನ್ 15 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್ ಮತ್ತು ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ […]

ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಉಪನ್ಯಾಸಕ ಹುದ್ದೆ ಖಾಲಿ

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ , ಕಾರ್ಕಳ ತಾಲೂಕಿನ ಮಿಯ್ಯಾರಿನಲ್ಲಿರುವ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜಿಗೆ ರಸಾಯನಶಾಸ್ತ್ರ ವಿಷಯಕ್ಕೆ M.sc ಹಾಗೂ B.Ed ವಿದ್ಯಾರ್ಹತೆ ಹೊಂದಿದ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿಗಳನ್ನು ಸದ್ರಿ ಕಾಲೇಜಿನ ಪ್ರಾಂಶುಪಾಲರಿಗೆ ಸಲ್ಲಿಸಲು ಜೂನ್ 8 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಹಿಂದುಳಿದ ವರ್ಗಗಳ ಇಲಾಖೆ ಉಡುಪಿ, ಅನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.

ಪೋಲ್ಯಾಂಡ್-ಹಂಗೇರಿ ದೇಶಗಳಲ್ಲಿ ಭಾರೀ ಟ್ರಕ್ ಚಾಲಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಉಡುಪಿ: ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಯುರೋಪ್‌ನ ಪೋಲ್ಯಾಂಡ್ ಮತ್ತು ಹಂಗೇರಿ ದೇಶಗಳಲ್ಲಿ ಭಾರೀ ಟ್ರಕ್ ಮತ್ತು ಟ್ರೇಲರ್ ಪುರುಷ ಮತ್ತು ಮಹಿಳಾ ಚಾಲಕರ ಹುದ್ದೆಗಳಿಗೆ ಬೇಡಿಕೆ ಬಂದಿದ್ದು, ಅಂತಾರಾಷ್ಟ್ರೀಯ ವಲಸೆ ಮಾಹಿತಿ ಕೇಂದ್ರ ಕರ್ನಾಟಕದಿಂದ ನೇರ ನೇಮಕಾತಿ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಜೂನ್ 11 ರೊಳಗಾಗಿ ನೊಂದಣಿ ಮಾಡಿಕೊಳ್ಳಬಹುದು. 2009ರ ಸೆಪ್ಟಂಬರ್ 9 ಕ್ಕಿಂತ ಮೊದಲು ಕೊಡಲಾದ ಭಾರಿ ಟ್ರಕ್ ಟ್ರೇಲರ್ ಚಾಲಕ ಪರವಾನಿಗೆ ಹೊಂದಿರಬೇಕು ಮತ್ತು ಇಂಗ್ಲೀಷ್ ಭಾಷಾಜ್ಞಾನ ಕಡ್ಡಾಯವಾಗಿದೆ. ಹೆಚ್ಚಿನ […]

ಪ್ರಾಥಮಿಕ ಮತ್ತು ಪ್ರೌಢ ಶಾಲಾ ಹಂತದ ಬಿ.ಐ.ಇ.ಆರ್.ಟಿ ಹುದ್ದೆಗಾಗಿ ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನ ಸಮಗ್ರ ಶಿಕ್ಷಣ ಯೋಜನೆಯ ಅಡಿಯಲ್ಲಿ ಜಿಲ್ಲೆಯಲ್ಲಿನ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಹಂತದಲ್ಲಿ ಖಾಲಿ ಇರುವ ಬಿ.ಐ.ಇ.ಆರ್.ಟಿ ಹುದ್ದೆಗಳನ್ನು ನೇರಗುತ್ತಿಗೆ ಆಧಾರದ ಮೇಲೆ ನಿಗದಿತ ವಿದ್ಯಾರ್ಹತೆ ಇರುವ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 9 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪಯೋಜನಾ ಸಮನ್ವಯಾಧಿಕಾರಿ, ಉಪನಿರ್ದೇಶಕರ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ ರಜತಾದ್ರಿ, ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.